ಬೆಳಗಾವಿ:ಕೋವಿಡ್ ನಿಂದ ಜನರು ಹಬ್ಬಗಳನ್ನ ಸರಳವಾಗಿ ಆಚರಿಸಿದ್ದರು. ಆದರೆ ಈ ಬಾರಿ ಕೊರೊನಾ ಕಡಿಮೆಯಾಗಿದ್ದರಿಂದ ಹಬ್ಬಗಳನ್ನ ಜೋರಾಗಿ ಮಾಡುತ್ತಿದ್ದಾರೆ. ಆದರೆ ಇಲ್ಲೊಂದು ಜಿಲ್ಲೆಯಲ್ಲಿ ದಸರಾ ಸಂಭ್ರಮದಲ್ಲಿದ್ದ ಜನರಿಗೆ ಡೆಂಘೀ ದಾಂಗುಡಿ ಆತಂಕ ಸೃಷ್ಟಿಸಿದೆ.
ಹೌದು ಬೆಳಗಾವಿಯ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದೆ. ಬೆಳಗಾವಿಯಲ್ಲಿ ಪ್ರಸಕ್ತ ಜನವರಿಯಿಂದ ಸೆಪ್ಟೆಂಬರ್ವರೆಗೆ 207 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 1,683ಕ್ಕೂ ಹೆಚ್ಚು ಮಂದಿಯ ರಕ್ತದ ಮಾದರಿ ತಪಾಸಣೆ ನಡೆಸಲಾಗಿದೆ. ಡೆಂಘೀಯಿಂದಾಗಿ ನೆರೆ ರಾಜ್ಯದಲ್ಲಿ ಚಿಕಿತ್ಸೆಗೆ ಒಳಗಾಗಿ ಮೃತಪಟ್ಟವರ ಮಾಹಿತಿ ಇದೆ. ಈ ಮಧ್ಯೆ ಆರೋಗ್ಯ ಇಲಾಖೆಯಿಂದ ತಪಾಸಣಾ ಕ್ರಮ ಜರುಗಿಸಲಾಗಿದೆ.
https://kannadanewsnow.com/kannada/good-news-for-ramya-fans-swathi-muthina-male-haniye-is-a-glamorous-star-who-is-back-in-colour-with-the-film/
ಆದರೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಆಕ್ಷೇಪಗಳೂ ವ್ಯಕ್ತವಾಗ್ತಿವೆ. ಲಾರ್ವಾ ಸಮೀಕ್ಷೆ, ಅರಿವು ಮೂಡಿಸುವುದು, ತ್ಯಾಜ್ಯ ವಿಲೇವಾರಿ, ಔಷಧ ಸಂಗ್ರಹ, ಬಿಳಿರಕ್ತ ಕಣಗಳ ಸಂಗ್ರಹ ಸೇರಿದಂತೆ ಇನ್ನಷ್ಟು ಮುಂಜಾಗ್ರತಾ ಕ್ರಮಗಳು ಅಗತ್ಯ ಇದೆ ಎನ್ನುತ್ತಾರೆ ಸೋಂಕಿತರು.