ಮೈಸೂರು: ವಿಶ್ವವಿಖ್ಯಾತ ಮೈಸೂರು ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ. ಕಳೆದ ಎರಡು ವರ್ಷಗಳ ನಂತರ ನಾಡಹಬ್ಬ ದಸರಾ ಈಬಾರಿ ಕಳೆಗುಂದಿದೆ. ಸಾಂಸ್ಕೃತಿಕ ನಗರಿ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.
BIGG NEWS: ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಿಎಂ; ಮಠದಲ್ಲೇ ತಿಂಡಿ ಸೇವಿಸಿದ ಬೊಮ್ಮಾಯಿ
ರಾಜ್ಯ, ದೇಶಗಳಿಂದ ಪ್ರವಾಸಿಗರು ಮೈಸೂರಿನತ್ತ ಮುಖ ಮಾಡಿದ್ದಾರೆ. ಇಂದು ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಆರಂಭವಾಗಲಿದೆ. ಜಂಬೂ ಸವಾರಿಯಲ್ಲಿ ಪ್ರದರ್ಶನವಾಗುವ ಜಿಲ್ಲಾವಾರು ಸ್ತಬ್ಧಚಿತ್ರಗಳ ಪಟ್ಟಿ ಇಲ್ಲಿದೆ.ಮಧ್ಯಾಹ್ನ 2.36 ರಿಂದ 02:50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಂದಿ ಧ್ವಜ ಕಂಬಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ.
BIGG NEWS: ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಿಎಂ; ಮಠದಲ್ಲೇ ತಿಂಡಿ ಸೇವಿಸಿದ ಬೊಮ್ಮಾಯಿ
ನಂತರ ಪೂಜೆ ಬಳಿಕ ಸಂಜೆ 05:07 ರಿಂದ 5.18ರ ವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆ ಪ್ರಾರಂಭವಾಗುತ್ತದೆ. ಅರಮನೆಯಿಂದ ಕೆ.ಆರ್ ಸರ್ಕಲ್, ಸಯ್ಯಾಜಿ ರಾವ್, ರಸ್ತೆ, ಆಯುರ್ವೇದಿಕ್ ವೃತ್ತ, ಆರ್.ಎಂ.ಸಿ, ತಿಲಕ್ ನಗರ ರಸ್ತೆ ಮೂಲಕ ಜಂಬೂ ಸವಾರಿ ಬನ್ನಿ ಮಂಟಪ ತಲುಪಲಿದೆ. ಜಂಬೂ ಸವಾರಿ ಮೆರವಣಿಗೆ ವೇಳೆ 47 ಸ್ತಬ್ಧಚಿತ್ರ ಪ್ರದರ್ಶನವಾಗಲಿವೆ.