ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಗುರಿಯಾಗಿ ಇಟ್ಟುಕೊಂಡು ತಮ್ಮ ಬಲ ಪ್ರದರ್ಶನ ಹಾಗೂ ನಾಯಕತ್ವ ಸಾಬೀತುಪಡಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದಲ್ಲಿ ರಥಯಾತ್ರೆ ನಡೆಸಲು ಚಿಂತನೆ ರೂಪಿಸಿದ್ದಾರೆ.
BIGG NEWS: ಬಿಜೆಪಿ ಕಾರ್ಯಕಾರಿಣಿ ಸಭೆಗೆ ಮುಹೂರ್ತ ಫಿಕ್ಸ್; ಶುಕ್ರವಾರದಂದು ಬೆಂಗಳೂರಿಗೆ ಅರುಣ್ ಸಿಂಗ್ ಆಗಮನ
ಸದ್ಯಕ್ಕೆ ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಆಗುವ ಕನಸನ್ನು ಸಾಕಷ್ಟು ನಾಯಕರು ಹೊಂದಿದ್ದು, ಇವರಲ್ಲಿ ಪ್ರತಿಪಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಸಹ ಮುಂಚೂಣಿಯಲ್ಲಿ ಇದ್ದಾರೆ.ಡಿಕೆಶಿ ಈಗಾಗಲೇ ಮೇಕೆದಾಟು ಪಾದಯಾತ್ರೆ ನಡೆಸಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದು, ಇದನ್ನು ಮೀರುವ ಮಟ್ಟದಲ್ಲಿ ಹಾಗೂ ಜನಪ್ರಿಯರಾಗಲು ಸಿದ್ದರಾಮಯ್ಯ ಯೋಜನೆ ರೂಪಿಸುತ್ತಿದ್ದಾರೆ.
BIGG NEWS: ಬಿಜೆಪಿ ಕಾರ್ಯಕಾರಿಣಿ ಸಭೆಗೆ ಮುಹೂರ್ತ ಫಿಕ್ಸ್; ಶುಕ್ರವಾರದಂದು ಬೆಂಗಳೂರಿಗೆ ಅರುಣ್ ಸಿಂಗ್ ಆಗಮನ
ಈಗಾಗಲೇ ರಾಜ್ಯ ಕಾಂಗ್ರೆಸ್ನಲ್ಲಿ ತಮ್ಮನ್ನು ಬೆಂಬಲಿಸುವ ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಹಾಲಿ ಶಾಸಕರು ಸೇರಿದಂತೆ ಹಲವು ಮುಖಂಡರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಅತ್ಯಂತ ವ್ಯವಸ್ಥಿತವಾಗಿ ಯೋಜನೆ ರೂಪಿಸಿ, ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನದ ಬಳಿಕ ರಥಯಾತ್ರೆ ನಡೆಸಿ ರಾಜ್ಯ ಸುತ್ತಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.