ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ, ಚಾಮರಾಜನಗರ
ಚಾಮರಾಜನಗರ:ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಗಡಿ ಜಿಲ್ಲೆ ಚಾಮರಾಜನಗರದಿಂದ ಮಹದೇಶ್ವರ ಮಡಿಲ ಜೊತೆ ಪ್ರಕೃತಿಯೊಂದಿಗಿನ ನೋಟದ ಮಧ್ಯೆ ಅಪ್ಪು ಸ್ತಬ್ಧಚಿತ್ರ ಅನ್ನು ಅದ್ಬುತವಾಗಿ ರೂಪಿಸಲಾಗಿದೆ.
BIG NEWS: ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ; ಅರಮನೆಗೆ ಆಗಮಿಸಿದ ವಿವಿಧ ಕಲಾತಂಡಗಳು
ಚಾಮರಾಜನಗರ ರಾಯಭಾರಿ ಆಗಿದ್ದ ಹಾಗೂ ಚಾಮರಾಜನಗರದ ತವರಿನ ನಂಟು ಹೊಂದಿದ್ದ ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರಿಗೆ ಸ್ತಬ್ಧ ಚಿತ್ರದ ಮೂಲಕ ಗೌರವ ಸಲ್ಲಿಸಲು ಚಾಮರಾಜನಗರ ಜಿಲ್ಲಾ ಪಂಚಾಯತ್ ಈ ಸಲ ಮುಂದಾಗಿದೆ.
ಅಭಿಮಾನಿಗಳು ಅಪ್ಪು ತೇರನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.ಹನೂರು ತಾಲ್ಲೋಕಿನ ಕಲಾವಿದ ಮಹಾದೇವ್ ಎಂಬುವರೊಟ್ಟಿಗೆ 15 ಜನರ ತಂಡ ಈ ಸ್ತಬ್ಧ ಚಿತ್ರ ತಯಾರಿಸಿದ್ದಾರೆ.
BIG NEWS: ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ; ಅರಮನೆಗೆ ಆಗಮಿಸಿದ ವಿವಿಧ ಕಲಾತಂಡಗಳು
“ಪ್ರಕೃತಿ ಮಡಿಲಿನ ಹುಲಿ ಮತ್ತು ಆನೆ ಅರಣ್ಯಧಾಮ” ಎಂದು ಸ್ತಬ್ಧ ಚಿತ್ರಕ್ಕೆ ಹೆಸರಿಡಲಾಗಿದೆ. ಜಿಲ್ಲೆಯ ಪ್ರಕೃತಿ, ವನ್ಯಜೀವಿ ಸಂಪತ್ತು, ಪವಾಡ ಪುರುಷ ಮಲೆ ಮಹದೇಶ್ವರ ಸ್ವಾಮಿಯನ್ನು ಸ್ತಬ್ಧ ಚಿತ್ರದಲ್ಲಿ ಬಿಂಬಿಸಲಾಗಿದೆ.ಸ್ತಬ್ದಚಿತ್ರ ಮುಂಭಾಗ ದೊಡ್ಡ ಹುಲಿಯ ಮುಖ ಇದೆ. ಹಸಿರು ಆವರಿಸಿರುವ ಬೆಟ್ಟ, ಆನೆ ಸೇರಿದಂತೆ ಇತರೆ ಪ್ರಾಣಿಗಳು, ಮಧ್ಯದಲ್ಲಿ ಹುಲಿಯ ಮೇಲೆ ಕುಳಿತಿರುವ ಮಲೆ ಮಹದೇಶ್ವರ ಸ್ವಾಮಿಯ ಪ್ರತಿಕೃತಿ ಹಾಗೂ ಹಿಂಭಾಗದಲ್ಲಿ ಮಂದಸ್ಮಿತ ಪುನೀತ್ರಾಜ್ಕುಮಾರ್ ಅವರ ದೊಡ್ಡ ಪ್ರತಿಕೃತಿ ಅಳವಡಿಸಲಾಗಿದೆ.