ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆ ಇಂದು ನಡೆಯಲಿದೆ. ಈ ಜಂಬೂಸವಾರಿ ಆರಂಭಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಸಿಎಂ ಬಸವರಾಜ ಬೊಮ್ಮಾಯಿ ನಂದಿ ಧ್ವಜ ಕಂಬಕ್ಕೆ ಪೂಜೆ ಸಲ್ಲಿಸಿದ ಬಳಿಕ, ದಸರಾ ಜಂಬೂಸವಾರಿ ಮೆರವಣಿಗೆ ಆರಂಭಗೊಳ್ಳಲಿದೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಅದರಲ್ಲೂ ಕೊರೋನಾ ನಂತ್ರ 2 ವರ್ಷಗಳ ಬಳಿಕ ದಸರಾದಲ್ಲಿ ಸ್ತಬ್ದಧ ಚಿತ್ರಗಳ ಪರದರ್ಶನ ಕೂಡ ನಡೆಯುತ್ತಿದೆ. ಈ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ 31 ಜಿಲ್ಲೆಗಳ ಕಲೆ, ಸಾಹಿತ್ಯ ಇತಿಹಾಸವಿರುವ ಸ್ಥಬ್ದಚಿತ್ರಗಳನ್ನು ಪ್ರದರ್ಶನಗೊಳಿಸಲಾಗುತ್ತಿದೆ.
ಇನ್ನೊಂದು ವಿಶೇಷವೆಂದರೇ ಈ ಬಾರಿ ದಸರಾದಲ್ಲಿ ಪುನೀತ್ ರಾಜ್ ಕುಮಾರ್ ಅವರ ಸ್ತಬ್ದ ಚಿತ್ರ ಪ್ರದರ್ಶನವೂ ಎಲ್ಲರ ಗಮನ ಸೆಳೆದಿದೆ. ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಸ್ತಬ್ಧ ಚಿತ್ರ ಸಾಗುವುದನ್ನು ಕಾಣೋದಕ್ಕೆ ಜನರು ಕಾತುರದಿಂದ ಕಾಯುತ್ತಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭಗೊಂಡಿದೆ. ಅದಕ್ಕೂ ಮುನ್ನಾ ಸಿಎಂ ಬಸವರಾಜ ಬೊಮ್ಮಾಯಿಯವರು ನಂದಿ ಧ್ವಜ ಕಂಬಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಈ ಬಳಿಕ ಐತಿಹಾಸಿ ದಸರಾಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಸಂಜೆ 5.07 ರಿಂದ 5.18ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಿಎಂ ಬೊಮ್ಮಾಯಿಯವರು ನಾಡಿನ ಅಧಿದೇವತೆ ಚಾಮುಂಡೇಶ್ವರಿಯನ್ನು ಹೊತ್ತಿರುವಂತ ಜಂಬೂ ಸವಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.
ಈ ಬಳಿಕ ಮೈಸೂರು ಅರಮನೆಯಿಂದ ಆರಂಭಗೊಳ್ಳಲಿರುವಂತ ಜಂಬೂಸವಾರಿಯು ಕೆ ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಆರ್ ಎಂಸಿ, ತಿಲಕ್ ನಗರ ರಸ್ತೆ ಮೂಲಕ ಬನ್ನಿ ಮಂಟಪವನ್ನು ತಲುಪಲಿದೆ.