ಮುಂಬೈ : ರಿಲಯನ್ಸ್ ಇಂಡಸ್ಟ್ರೀಸ್ ಗ್ರೂಪ್ ಸಿಇಒ ಮುಖೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಅಂಬಾನಿ ಅವರಿಗೆ ಮತ್ತೊಮ್ಮೆ ಕೊಲೆ ಬೆದರಿಕೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ರಿಲಯನ್ಸ್ ಫೌಂಡೇಶನ್ ಕಚೇರಿಗೆ ಕರೆ ಮಾಡಿ ಅಂಬಾನಿ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾನೆ. ಮುಂಬೈ ಪೊಲೀಸರು ಈ ಬಗ್ಗೆ ತಕ್ಷಣ ಗಮನ ಹರಿಸಿದ್ದು, ತನಿಖೆ ಆರಂಭಿಸಿದ್ದಾರೆ. ಮುಕೇಶ್ ಅಂಬಾನಿ ಅವರ ಆಂಟಿಲಿಯಾ ನಿವಾಸಕ್ಕೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ರಿಲಯನ್ಸ್ ಕಚೇರಿಯ ಸ್ಥಿರ ದೂರವಾಣಿಗೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದೆ. ಈ ಕರೆ ಮೂಲಕ ರಿಲಯನ್ಸ್ ಆಸ್ಪತ್ರೆಗೆ ಬಾಂಬ್ ಸ್ಫೋಟದ ಬೆದರಿಕೆ ಹಾಕಲಾಗಿದೆ. ಅಲ್ಲದೇ, ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿಗೆ ಕೊಲೆ ಬೆದರಿಕೆಯನ್ನೂ ಹಾಕಲಾಗಿದ್ದು, ಡಿಬಿ ಮಾರ್ಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದಕ್ಕೂ ಮುನ್ನ ಕೊಲೆ ಬೆದರಿಕೆ ಹಾಕಿದ್ದರು
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೂ ಈ ಹಿಂದೆ ಜೀವ ಬೆದರಿಕೆ ಹಾಕಲಾಗಿತ್ತು. ಆಗಸ್ಟ್ ತಿಂಗಳಿನಲ್ಲಿ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಸಾರ್ವಜನಿಕ ದೂರವಾಣಿ ಸಂಖ್ಯೆಗೆ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿತ್ತು. ಈ ದೂರನ್ನ ಡಿ. ಬಿ. ಮಾರ್ಗ್ ಠಾಣೆಗೆ ದಾಖಲಿಸಿದ ಬಳಿಕ ಪೊಲೀಸರು ಕ್ಷಿಪ್ರ ತನಿಖೆ ಆರಂಭಿಸಿದ್ದಾರೆ. ಬಳಿಕ ಆರೋಪಿ ಬಿಷ್ಣು ವಿದು ಭೌಮಿಕ್ (ವಯಸ್ಸು 56) ಎಂಬಾತನನ್ನು ಬಂಧಿಸಲಾಗಿತ್ತು. ಆರೋಪಿಯು ದಕ್ಷಿಣ ಮುಂಬೈನಲ್ಲಿ ಆಭರಣ ಮಳಿಗೆಯನ್ನು ಹೊಂದಿದ್ದಾನೆ.