ಜಮ್ಮು ಮತ್ತು ಕಾಶ್ಮೀರ: ಪೊಲೀಸರ ರೈಫಲ್ ನಿಂದ ಆಕಸ್ಮಿಕವಾಗಿ ಹಾರಿದ ಗುಂಡು ತಗುಲಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಜಮ್ಮು& ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ.
ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಮೊಹಮ್ಮದ್ ಆಸಿಫ್ ಪಡ್ರೂ ಎಂದು ಗುರುತಿಸಲಾಗಿದೆ. ಪುಲ್ವಾಮಾದ ಹಾಲ್ನಲ್ಲಿ ಈ ಘಟನೆ ನಡೆದಿದ್ದು, ಕರ್ತವ್ಯದಲ್ಲಿದ್ದ ಪೋಲೀಸ್ ಆಕಸ್ಮಿಕವಾಗಿ ತನ್ನ ರೈಫಲ್ನಿಂದ ಗುಂಡು ಹಾರಿಸಿದ್ದರು. ಆಕಸ್ಮಿಕ ಗುಂಡಿನ ದಾಳಿಯಲ್ಲಿ ಮೊಹಮ್ಮದ್ ಆಸಿಫ್ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪೊಲೀಸರು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
ಘಟನೆ ಸಂಬಂಧ ಪೊಲೀಸ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರ ಹೇಳಿಕೆ ತಿಳಿಸಿದೆ.