ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇತ್ತೀಚಿಗೆ ಕರ್ನಾಟಕದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮನಕಲುವ ಘಟನೆ ನಡೆದಿದ್ದು, ಈ ಕುರಿತಂತೆ ರಾಹುಲ್ ಗಾಂಧಿಯವರು ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿಯವರು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಗಾಯಗೊಂಡಿದ್ದ ಮರಿ ಆನೆಯೊಂದು ತನ್ನ ತಾಯಿಯ ಜೊತೆ ಜೀವ ಉಳಿಸಿಕೊಳ್ಳಲು ಎಣಗಾಡುತ್ತಿತ್ತು. ಈ ದೃಶ್ಯವನ್ನು ಕಂಡು ರಾಹುಲ್ ಗಾಂಧಿಯವರು ನೊಂದರು. ಈ ಬಗ್ಗೆ ಗಮನ ಹರಿಸುವಂತೆ ಸಿಎಂ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.
ನಾನು ರಾಜಕೀಯ ಗಡಿಗಳಾಚೆಗೆ ದಾಟಿ ಮಾನವೀಯ ದೃಷ್ಟಿಯಿಂದ ಆನೆಯನ್ನು ಉಳಿಸಲು ನಿಮ್ಮ ಮನವಿ ಮಾಡುತ್ತೇನೆ. ಸರಿಯಾದ ಚಿಕಿತ್ಸೆ ನೀಡಿದರೆ ಅದು ಬದುಕುಳಿಯುತ್ತದೆ ಎಂದು ನನಗೆ ವಿಶ್ವಾಸವಿದೆ. ಆನೆಯನ್ನು ಉಳಿಸಲು ನೀವು ಸಮಯೋಚಿತ ಸಹಾಯವನ್ನು ನೀಡುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
PSI ನೇಮಕಾತಿ ಪರೀಕ್ಷೆ ಅಕ್ರಮ: ಮಾಜಿ ಸಿಎಂ ಒಬ್ಬರ ಕೈವಾಡವಿದೆ, ಸಿಬಿಐ ತನಿಖೆಗೆ ವಹಿಸಿ – ಯತ್ನಾಳ್ ಒತ್ತಾಯ