ಉತ್ತರ ಪ್ರದೇಶ : ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲೋನಿಯಲ್ಲಿ ನಡೆದಿದೆ.
ಲೋನಿಯ ಬಾಬುಲ್ ಗಾರ್ಡನ್ ಕಾಲೋನಿಯಲ್ಲಿ ಸ್ಫೋಟ ಸಂಭವಿಸಿದೆ. ಪರಿಣಾಮ ಮನೆಯ ಗೋಡೆಗಳು ಕುಸಿದಿದೆ. ಇನ್ನು ಅವಶೇಷದ ಅಡಿಯಲ್ಲಿ ಸಿಲುಕಿದ್ದ 6 ಜನರನ್ನು ಹೊರ ರಕ್ಷಿಸಲಾಗಿದ್ದು, ಅದರಲ್ಲಿ 2 ಗಾಯಗೊಮಡಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.
ಸಿಲಿಂಡರ್ ಪೈಪ್ನಲ್ಲಿನ ಸೋರಿಕೆಯು ಸ್ಫೋಟಕ್ಕೆ ಕಾರಣವಾಗಿದೆ. ಬಬ್ಲೂ ಗಾರ್ಡನ್ ಕಾಲೋನಿಯಲ್ಲಿರುವ ಮನೆಯಲ್ಲಿ ಆಹಾರ ತಯಾರಿಸುತ್ತಿದ್ದಾಗ ಸಂಭವಿಸಿದೆ ಎಂದು ಮೀರತ್ ಪೊಲೀಸ್ ಮಹಾನಿರೀಕ್ಷಕ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.
ಅಗ್ನಿಶಾಮಕ ದಳದವರು ಅಗೆಯುವ ಯಂತ್ರವನ್ನು ಬಳಸಿ ಎಲ್ಲರನ್ನೂ ಹೊರತಂದು ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಸಾಗಿಸಿದರು, ಅಲ್ಲಿ ವೈದ್ಯರು ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಇನ್ನಿಬ್ಬರು ಲೋನಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಇರಾಜ್ ರಾಜಾ ಪಿಟಿಐಗೆ ತಿಳಿಸಿದ್ದಾರೆ.
ಘಟನೆ ಕುರಿತಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರಿಗೆ ಸೂಕ್ತ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
BREAKING: ‘ECLGS ಯೋಜನೆ’ಯಡಿ ‘ನಾಗರಿಕ ವಿಮಾನಯಾನ ವಲಯ’ಕ್ಕೆ ‘ಸಾಲದ ಮಿತಿ’ ಹೆಚ್ಚಿಸಿದ ‘ಕೇಂದ್ರ ಸರ್ಕಾರ’