ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಡಿಕೆ ಬ್ರದರ್ಸ್ ಇಡಿ ನೋಟಿಸ್ ನೀಡಿದೆ.
BIGG NEWS: ಮಂಡ್ಯದಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ
ಡಿ.ಕೆ ಶಿವಕುಮಾರ್ಗೆ ಇಡಿಯಿಂದ ಸಮನ್ಸ್ ಬಂದಿದ್ದು, ನಾಳೆ ದೆಹಲಿಗೆ ವಿಚಾರಣೆಗೆ ಬರಲೇಬೇಕು ಎಂದು ಸಮನ್ಸ್ನಲ್ಲಿ ಉಲ್ಲೇಖಿಸಲಾಗಿದೆ. ಈ ನಡುವೆ ನಾಳೆ ವಿಚಾರಣೆಗೆ ಹಾಜರಾಗದಿರಲು ಡಿ.ಕೆ.ಶಿವಕುಮಾರ್ ಹಾಗೂ ಡಿಕೆ.ಸುರೇಶ್ ನಿರ್ಧರಿಸಿದ್ದಾರೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕ್ಕೆ ತಲುಪಿ ಮುನ್ನಡೆಯುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಲಿರುವ ಕಾರಣದಿಂದಾಗಿ ವಿಚಾರಣೆಗೆ ಬೇರೆ ದಿನಾಂಕ ನಿಗದಿ ಮಾಡುವಂತೆ ಡಿಕೆ ಬ್ರದರ್ಸ್ ಇಡಿಗೆ ಮನವಿ ಮಾಡಿದ್ದಾರೆ.