ಬೆಂಗಳೂರು: ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲಸಂಗಮ ಕ್ಷೇತ್ರದಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಜನವರಿ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಅ.8ರಂದು ಜನತಾ ಮಿತ್ರ ಸಮಾರೋಪ ಸಮಾವೇಶ: ಪೂರ್ವ ಸಿದ್ಧತಾ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ
ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ 16 ನೇ ಸಭೆಯಲ್ಲಿ ಅವರು ಮಾತನಾಡಿ. ಬಸವ ಅಂತರರಾಷ್ಟ್ರೀಯ ಕೇಂದ್ರದ ಕಟ್ಟಡ, ಡಿಜಿಟಲ್ ಕೇಂದ್ರ, ವಸ್ತುಸಂಗ್ರಹಾಲಯ, ಕೂಡಲಸಂಗಮ ಸಂಕೀರ್ಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು. ಕೂಡಲ ಸಂಗಮದಲ್ಲಿ ಬಸವಣ್ಣನವರ ಜೀವನ ಚರಿತ್ರೆ ಹಾಗೂ ವಿಚಾರಧಾರೆಗಳ ಪೂರ್ಣ ಚಿತ್ರಣವನ್ನು ಬಿಂಬಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
‘ST ಸಮುದಾಯ’ದವರಿಗೆ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿ – ಸಿದ್ಧರಾಮಯ್ಯ ಆಗ್ರಹ
ಈ ಸಂದರ್ಭದಲ್ಲಿ ಸಚಿವರಾದ ಆರ್.ಅಶೋಕ್, ಮುರುಗೇಶ್ ನಿರಾಣಿ, ಹುನುಗುಂದ ಶಾಸಕ ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಹಾಗೂ ಕೂಡಲು ಸಂಗಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.