ಮಂಡ್ಯ: ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ಈವೇಳೆ ಮಂಡ್ಯದಲ್ಲಿ ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿ ಹಾಕಿದ್ದ ಬ್ಯಾನರ್ನಲ್ಲಿ ವೀರ ಸಾವರ್ಕರ್ ಅವರ ಫೋಟೋ ಕಾಣಿಸಿಕೊಂಡಿದೆ.
ಈ ಬ್ಯಾನರ್ನಲ್ಲಿ ರಾಹುಲ್ ಗಾಂಧಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಫೋಟೋ ಕೂಡ ಇದೆ. ಆದರೆ ಇದು ದುಷ್ಕರ್ಮಿಗಳ ಕೈವಾಡ ಎಂದು ಕಾಂಗ್ರೆಸ್ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದರು, ಚಿತ್ತನಹಳ್ಳಿ ಬಂದು ತಲುಪಿದೆ. ಅದರಂತೆ ರಾಹುಲ್ ಗಾಂಧಿಯನ್ನು ಸ್ವಾಗತಿಸುವ ಹಾಗೂ ಯಾತ್ರೆಗೆ ಸಂಬಂಧಿಸಿದ ಅನೇಕ ಬ್ಯಾನರ್ಗಳನ್ನು ಅಳವಡಿಸಲಾಗಿತ್ತು. ಈ ಪೈಕಿ ಶಾಂತಿನಗರ ಶಾಸಕ ನಲಪಾಡ್ ಅಹಮದ್ ಹ್ಯಾರಿಸ್ ಅವರಿಗೆ ಸಂಬಂಧಿಸಿದ್ದು ಎಂದು ಹೇಳಲಾಗುತ್ತಿರುವ ಬ್ಯಾನರ್ನಲ್ಲಿ ವೀರ ಸಾವರ್ಕರ್ ಅವರ ಫೋಟೋ ಕಾಣಿಸಿಕೊಂಡಿದೆ. ಇದು ಕಾಂಗ್ರೆಸ್ ನಾಯಕರನ್ನು ಎರಡನೇ ಬಾರಿ ಮುಜುಗರಕ್ಕೀಡು ಮಾಡಿದೆ.