ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಣಿಸ ಸಭೆ ನಡೆದಿದೆ. ಈವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ನಮ್ಮ ಮುಂದಿನ ಯಾತ್ರೆ ವಿಜಯಯಾತ್ರೆ. ನಮ್ಮನ್ನ ಕಟ್ಟಿ ಹಾಕುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಿಶ್ವಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಸಾಧನೆಗಳನ್ನ ಜನರ ಮನೆಗಳಿಗೆ ಮುಟ್ಟಿಸುತ್ತೇವೆ. ಪ್ರಧಾನಿ ಮೋದಿ , ಅಮಿತ್ ಶಾ, ಜೆಪಿ ನಡ್ಡಾ ನೇತೃತ್ವದಲ್ಲಿ ರಾಜ್ಯದಲ್ಲಿ ನಿಶ್ಚಿತವಾಗಿ ಗುರಿಯನ್ನು ತಲುಪಿ ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ. ಯಾವ ಶಕ್ತಿ ಕೂಡ ನಾವು ಅಧಿಕಾರಕ್ಕೆ ಬರೋದನ್ನ ತಡೆಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷಕ್ಕೆ ನಾವೆಲ್ಲ ಮನವರಿಕೆ ಮಾಡಿಕೊಡಬೇಕಿದೆ ಎಂದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆ ರೂಪಿಸೋ ಮೂಲಕ ಸುಧಾರಣೆ ಮಾಡುವಲ್ಲಿ ಬಿಜೆಪಿ ಪಕ್ಷ ಯಶಸ್ವಿಯಾಗಿದೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಅನೇಕ ವರ್ಷದಿಂದ ಮನೆಗಳಿಗೆ ವಿದ್ಯುತ್ ಇರಲಿಲ್ಲ. ಅಂತಹ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಮಾಡಿದ್ದೇವೆ ಎಂದು ಹೇಳಿದ್ದಾರೆ.