ಧಾರವಾಡ : ಕೇಂದ್ರ ಸರ್ಕಾರವು ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ ಬೆನ್ನಲ್ಲೆ ಮದರಸಾಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ.
ಸರ್ಕಾರಿ ಅನುದಾನದಲ್ಲಿ ಕೆಲ ಮದರಸಾ ನಡೆಯುತ್ತಿವೆ, ಸರ್ಕಾರಿ ಅನುದಾನದಲ್ಲಿದ್ದರೂ ದೇಶ ವಿರೋಧಿ ಚಟುವಟಿಕೆ ಮಾಡುತ್ತಿವೆ. ಅಂತಹ ಮದರಸಾಗಳನ್ನು ಪತ್ತೆ ಮಾಡಬೇಕು ಎಂದು ಮನವಿ ಮಾಡಲಾಗಿದೆ. ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
ಇನ್ನೊಂದು ಕಡೆ ರಾಮನಗರ ಜಿಲ್ಲೆಯಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿ ಮದರಸಾ ಶಿಕ್ಷಣ ಸಂಸ್ಥೆ ನಿಷೇಧಿಸುವಂತೆ ಆಗ್ರಹಿಸಿದರು.
ಮದರಸಾಗಳಲ್ಲಿ ದ್ವೇಷ, ಮತಾಂಧತೆಯನ್ನು ಬಿತ್ತುವ ಕೆಲಸ ಮಾಡಲಾಗುತ್ತಿದೆ. ಮದರಸಾಗಳು ಉಗ್ರ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿವೆ. ಹೆಣ್ಣು ಮಕ್ಕಳಿಗೆ ದೌರ್ಜನ್ಯ ಎಸಗಿ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ. ಉತ್ತರ ಪ್ರದೇಶ, ಅಸ್ಸಾಂ ಮಾದರಿಯಂತೆ ರಾಜ್ಯದಲ್ಲೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.