ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ) ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ( RESERVATION FOR SC/ ST COMMUNITIES ) ಹೆಚ್ಚಳ ಸಂಬಂಧ ಮಹತ್ವದ ಸರ್ವ ಪಕ್ಷಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಒಮ್ಮತದ ನಿರ್ಣಯವನ್ನು ಕೈಗೊಳ್ಳಲಾಗಿಯಿತು. ಈ ಬಳಿಕ ನಾಳೆ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯನ್ನು ( Special Karnataka Cabinet Meeting ) ಕರೆದಿದ್ದು, ಅಧಿಕೃತವಾಗಿ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಿದೆ.
BREAKING NEWS : SC,ST ಸಮುದಾಯದ ಮೀಸಲಾತಿ ಹೆಚ್ಚಳ : ಸಿಎಂ ‘ಬಸವರಾಜ ಬೊಮ್ಮಾಯಿ’ ಘೋಷಣೆ |Basavaraj Bommai
ಈ ಕುರಿತಂತೆ ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 08-10-2022ರ ಶನಿವಾರದ ನಾಳೆ ಬೆಳಿಗ್ಗೆ 11.30ಕ್ಕೆ ಸಚಿವ ಸಂಪುಟದ ವಿಶೇಷ ಸಭೆಯನ್ನು ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.
ನಾಳೆ ಸಿಎಂ ಬೊಮ್ಮಾಯಿ ಕರೆದಿರುವಂತ ರಾಜ್ಯ ವಿಶೇಷ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಣಯವಾಗಿ ಎಸ್ಸಿ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಹಾಗೂ ಎಸ್ಟಿ ಮೀಸಲಾತಿಯನ್ನು ಶೇ.3 ರಿಂದ 7ಕ್ಕೆ ಹೆಚ್ಚಿಸುವಂತ ಕಡತಕ್ಕೆ ಅಧಿಕೃತವಾಗಿ ಅನುಮೋದನೆ ನೀಡಲಾಗುತ್ತದೆ. ಈ ಮೂಲಕ ಎಸ್ಸಿ, ಎಸ್ಟಿ ಸಮುದಾಯದವರಿಗೆ ರಾಜ್ಯ ಸರ್ಕಾರ ಬಂಫರ್ ಗಿಫ್ಟ್ ನೀಡಲಿದೆ.