ಬೆಂಗಳೂರು : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ) ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ( RESERVATION FOR SC/ ST COMMUNITIES ) ಹೆಚ್ಚಳ ಸಂಬಂಧ ಮಹತ್ವದ ಸರ್ವ ಪಕ್ಷಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಒಮ್ಮತದ ನಿರ್ಣಯವನ್ನು ಕೈಗೊಳ್ಳಲಾಗಿಯಿತು. ಈ ಬಳಿಕ ನಾಳೆ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯನ್ನು ( Special Karnataka Cabinet Meeting ) ಕರೆದಿದ್ದು, ಅಧಿಕೃತವಾಗಿ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಿದೆ.
ಈ ಬೆನ್ನಲ್ಲೇ ಪಂಚಮಸಾಲಿ ಸಮುದಾಯ ಶಕ್ತಿ ಪ್ರದರ್ಶನ ಮಾಡಿದೆ. ಪಂಚಮಸಾಲಿ ಸಮುದಾಯಕ್ಕೂ 2ಎ ಮೀಸಲಾತಿ ನೀಡಬೇಕು ಎಂದು ಅರಭಾವಿ ವಿಧಾನಸಭಾ ಕ್ಷೇತ್ರದ ಮೂಡಲಗಿ ತಾಲೂಕಿನ ಕಲ್ಲೊಳ್ಳಿಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯಶ್ರೀನೇತೃತ್ವದಲ್ಲಿ ಸಮಾವೇಶ ನಡೆದಿದೆ.
ಸಮಾವೇಶದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರಿದ್ದರು.
ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಗಿಫ್ಟ್ ನೀಡಿದ್ದು, ಮೀಸಲಾತಿ ಹೆಚ್ಚಿಸಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಇಂದು ನಡೆದ ಸರ್ವಪಕ್ಷಗಳ ಸಭೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದು, ಎಸ್ ಸಿ ಮೀಸಲಾತಿ ಶೇ 15 ರಿಂದ 17, ಎಸ್ ಟಿ ಮೀಸಲಾತಿ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಿದ್ದಾರೆ. ಮೀಸಲಾತಿ ಹೆಚ್ಚಳದ ಕುರಿತು ನಾಳೆಯೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ. ಈ ಮೂಲಕ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಗಿಫ್ಟ್ ನೀಡಿದ್ದಾರೆ.
BIGG NEWS : ವಿಧಾನಸಭೆ ಚುನಾವಣೆಗೆ ‘BJP’ ರಣಕಹಳೆ : 50 ಕ್ಷೇತ್ರಗಳಲ್ಲಿ ಸಿಎಂ ಬೊಮ್ಮಾಯಿ, B.S ಯಡಿಯೂರಪ್ಪ ಪ್ರವಾಸ