ಬೆಂಗಳೂರು: ಮೈಸೂರು ಹಾಗೂ ಬೆಂಗಳೂರು, ಮೈಸೂರು ಮತ್ತು ತಾಳಗುಪ್ಪ ನಡುವೆ ಸಂಚರಿಸುತ್ತಿರುವಂತ ಎಕ್ಸ್ ಪ್ರೆಸ್ ರೈಲುಗಳ ( Express Train ) ಸಂಚಾರಿಸುತ್ತಿವೆ. ಈ ರೈಲುಗಳ ಹೆಸರನ್ನು ಭಾರತೀಯ ರೈಲ್ವೆ ಇಲಾಖೆಯಿಂದ ಮರುನಾಮಕರಣಗೊಳಿಸಲಾಗಿದೆ.
ಈ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು,. ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು “ಕುವೆಂಪು ಎಕ್ಸ್ಪ್ರೆಸ್” ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ ಎಂದು ಟ್ವೀಟ್ ಮಾಡಿದ್ದಾರೆ.
ಈ ಸಂಬಂಧ ಭಾರತೀಯ ರೈಲ್ವೆ ಇಲಾಖೆಯಿಂದ ( Indian Railways ) ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ರೈಲು ಸಂಖ್ಯೆ 12613/12614 ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ರೈಲು ( Wadeyar Express Train ) ಎಂಬುದಾಗಿ ಮರುನಾಮಕರಣಗೊಳಿಸಿದೆ.
ಇನ್ನೂ ರೈಲು ಸಂಖ್ಯೆ 16221/16222 ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ ಪ್ರೆಸ್ ರೈಲು ( Kuvempu Express Train ) ಎಂಬುದಾಗಿ ಮರುನಾಮಕರಣಗೊಳಿಸಲಾಗಿದೆ.
ಶುಕ್ರವಾರದ ಶುಭ ಸುದ್ದಿ!
ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ @AshwiniVaishnaw ji ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ @JoshiPralhad ಸರ್! pic.twitter.com/uZzHt1uzZz
— Pratap Simha (@mepratap) October 7, 2022