ಬೆಂಗಳೂರು : ಕನ್ನಡಿಗರಿಗೆ ಕೇಂದ್ರ ಸಿಬ್ಬಂದಿ ಆಯೋಗ (SSC) ಬಿಗ್ ಶಾಕ್ ನೀಡಿದ್ದು, ಎಸ್ಎಸ್ ಸಿ ಯ 20 ಸಾವಿರ ಹುದ್ದೆಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.
ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು ಎಂಟಿಎಸ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಈ ಮೂಲಕ ಕನ್ನಡಿಗರು ಮತ್ತು ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಬಿಗ್ ಶಾಕ್ ಎದುರಾಗಿದೆ.
ಈ ಹಿಂದೆ ಪ್ರಾದೇಶಿಕ ಭಾಷೆಗಳಿಗೆ ಪರೀಕ್ಷೆಯಲ್ಲಿ ಆದ್ಯತೆ ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆದರೆ ಕನ್ನಡ ಸೇರಿದಂತೆ ಯಾವುದೇ ಪ್ರಾದೇಶಿಕ ಭಾಷೆಗೆ ಅವಕಾಶ ಕಲ್ಪಿಸಿಲ್ಲ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಹ ತೀವ್ರವಾಗಿ ಖಂಡಿಸಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರೆಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.
ಕೇಂದ್ರ ಸಿಬ್ಬಂದಿ ಆಯೋಗವು ವಿವಿಧ ಸಚಿವಾಲಯಗಳು ಹಾಗೂ ಇಲಾಖೆಗಳಲ್ಲಿನ ಖಾಲಿ ಇರುವ 20 ಸಾವಿರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಶನಿವಾರವೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಡಿಸೆಂಬರ್ ನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಆದರೆ ಈ ಪರೀಕ್ಷೆಗಳನ್ನು ಇಂಗ್ಲಿಷ್-ಹಿಂದಿಯಲ್ಲಿ ಮಾತ್ರವೇ ನಡೆಸಲಾಗುತ್ತದೆ.
ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್ʼನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ.
ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? 1/5 pic.twitter.com/upGS4AXwKE
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 7, 2022