ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು ರಾಜ್ಯ ಸರ್ಕಾರಿ ನೌಕರರ ( Karnataka Government Employees ) ತುಟ್ಟಿಭತ್ಯೆಯನ್ನು ಶೇ.27.25ರಿಂದ ಶೇ.31ರಷ್ಟು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಶುಕ್ರವಾರ ಜುಲೈ.1, 2022ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ( Dearness Allowance – DA ) ಶೇ.3.75ರಷ್ಟು ಹೆಚ್ಚಳ ಮಾಡಿ ಅಧಿಕೃತವಾಗಿ ಆದೇಶಿಸಿದ್ದಾರೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1, 2022 ರಿಂದಲೇ ಜಾರಿಗೆ ಬರುವಂತೆ ಶೇ.27.25 ರಿಂದ ಶೇ.31ರಷ್ಟು ಹೆಚ್ಚಳ ( Dearness Allowance Hike – DA Hike ) ಮಾಡಲಾಗಿದೆ ಎಂದಿದ್ದಾರೆ.
ಈ ತುಟ್ಟಿಭತ್ಯೆಗಳು ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಸಹ ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯ್ತಿಗಳ ಪೂರ್ಣಾವಧಿ ನೌಕರರಿಗೆ ಕಾಲಿಕ ವೇತನ ಶ್ರೇಣಿಗಳಲ್ಲಿವು ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರಿಗೂ, ವಿವಿಯ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ಈ ಆದೇಶ ಅನ್ವಯಿಸುತ್ತದೆ ಎಂದಿದ್ದಾರೆ.
ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು. ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು ಎಂದಿದೆ.
ವರದಿ : ವಸಂತ ಬಿ ಈಶ್ವರಗೆರೆ