ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಇಂದು ರಾಜ್ಯ ಸಚಿವ ಸಂಪುಟ ಸಭೆ : `SC-ST’ ಮೀಸಲಾತಿ ಹೆಚ್ಚಳದ ಬಗ್ಗೆ ಅನುಮೋದನೆ
ಇಂದಿನಿಂದ ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಹಾಗೂ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಕೊಪ್ಪಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIGG NEWS : ದೇಶದಲ್ಲಿ ಮೊದಲ ಬಾರಿಗೆ `ಇ-ರುಪಿ’ ಪ್ರಾಯೋಗಿಕವಾಗಿ ಜಾರಿ : `RBI’ ಘೋಷಣೆ