ಶಿವಮೊಗ್ಗ : ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದು, ಕೂಡಲೇ ಸಚಿವ ಸ್ಥಾನ ಭರ್ತಿ ಮಾಡುವಂತೆ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಲಿ ಇರುವ ಸಚಿವ ಸ್ಥಾನಗಳನ್ನು ಕೂಡಲೇ ಭರ್ತಿ ಮಾಡಿ, ಚುನಾವಣೆ ಹಿನ್ನೆಲೆಯಲ್ಲಿ ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡಬೇಕು. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್. ಯಡಿಯೂರಪ್ಪ ಗಮನಹರಿಸಬೇಕು ಎಂದು ಹೇಳಿದ್ದಾರೆ.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಇದೀಗ ಮತ್ತೆ ಸಚಿವ ಸ್ಥಾನ ನೀಡದಿರುವ ಕುರಿತು ಅಸಮಾಧಾನ ಹೊರಹಾಕಿದ್ದಾರೆ.