ಬೆಂಗಳೂರು: ಕನ್ನಡ ಆಕಾಶದೀಪ ಕಿರುತೆರೆ ನಟಿ ದಿವ್ಯಾ ಶ್ರೀಧರ್ ಹಾಗೂ ನಟ ಅಮ್ಜದ್ ಖಾನ್ ಸಂಸಾರದಲ್ಲಿ ಬಿರುಕು ಬಿಟ್ಟಿದೆ. ಅವರು ಪತಿ ಅಮ್ಜದ್ ಖಾನ್ ವಿರುದ್ಧ ದಿವ್ಯಾ ಅನೇಕ ಆರೋಪಗಳನ್ನು ಮಾಡಿದ್ದಾರೆ.ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮಹಿಳಾ ಆಯೋಗ ಮಧ್ಯೆ ಎಂಟ್ರಿಕೊಟ್ಟಿದೆ.
BREAKING NEWS: ಭಗತ್ ಸಿಂಗ್ ಪಠ್ಯಕ್ಕೆ ಕೊಕ್, ಮತ್ತೊಂದು ವಿವಾದಕ್ಕೆ ನಾಂದಿ|Bhagat Singh
ನಟಿ ದಿವ್ಯಾ ಶ್ರೀಧರ್ ಗೆ ಸೂಕ್ತ ನ್ಯಾಯ ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಆಗ್ರಹಿಸಿದ್ದಾರೆ. ಈ ಕುರಿತಂತೆ ತಮಿಳು ನಾಡು ಮಹಿಳಾ ಆಯೋಗದ ಜೊತೆ ದೂರವಾಣಿ ಮೂಲಕವೂ ಮಾತನಾಡಿದ್ದಾರೆ.ತಮಿಳು ನಾಡು ಮಹಿಳಾ ಆಯೋಗದ ಜೊತೆ ದೂರವಾಣಿಯಲ್ಲಿ ಮಾತನಾಡುವುದರ ಜೊತೆಗೆ ಲಿಖಿತ ರೂಪದಲ್ಲೂ ಆಯೋಗಕ್ಕೆ ಪತ್ರ ಬರೆದು, ದಿವ್ಯಾಗೆ ಸೂಕ್ತ ರಕ್ಷಣೆ ಮತ್ತು ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರಂತೆ.
BREAKING NEWS: ಭಗತ್ ಸಿಂಗ್ ಪಠ್ಯಕ್ಕೆ ಕೊಕ್, ಮತ್ತೊಂದು ವಿವಾದಕ್ಕೆ ನಾಂದಿ|Bhagat Singh
ದಿವ್ಯಾ ಶ್ರೀಧರ್ ತನ್ನ ಗಂಡನಿಂದ ದೈಹಿಕ ಹಲ್ಲೆ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದರಿಂದ ಅವರಿಗೆ ರಕ್ಷಣೆ ನೀಡಬೇಕು. ಗರ್ಭಿಣಿ ಅನ್ನುವುದನ್ನೂ ನೋಡದೇ ಆಕೆಯ ಪತಿಯು ಹೊಟ್ಟೆಗೆ ಒದ್ದಿರುವ ಕುರಿತು ಗಂಭೀರ ಪ್ರಕರಣ ಎಂದು ಪರಿಗಣಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.
ಪ್ರಕರಣದ ಹಿನ್ನೆಲೆ?
2017ರಿಂದ ದಿವ್ಯಾ ಶ್ರೀಧರ್ ಹಾಗೂ ಅಮ್ಜದ್ ಇಬ್ಬರು ಪ್ರೀತಿ ಮಾಡುತ್ತಿದ್ದರು. ಕೊರೊನಾದಿಂದ ಲಾಕ್ ಡೌನ್ ಆಗಿದ್ದ ಸಮಯಲ್ಲಿ ಅಮ್ಜದ್ ಸಂಕಷ್ಟದಲ್ಲಿದ್ದರು. ಈ ವೇಳೆ ದಿವ್ಯಾ ಸಹಾಯ ಮಾಡಿದ್ದರು ಎನ್ನಲಾಗಿದೆ. ಲಾಕ್ಡೌನ್ ನಂತರದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಮದುವೆ ನಂತರ ಇಬ್ಬರೂ ಚೆನ್ನೈನಲ್ಲಿ ನೆಲೆಸಿದ್ದರು. ಈಗ ಇವರ ಸಂಸಾರದ ಜಗಳ ಬೀದಿಗೆ ಬಂದಿದೆ.