ಕಲಬುರಗಿ: ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಲಬುರಗಿ ಸಿಪಿಐ ಶ್ರೀಮಂತ್ ಇಲ್ಲಾಳ್ ಆರೋಗ್ಯವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಚಾರಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಗಾಂಜಾ ಆರೋಪಿಗಳನ್ನು ಬಂಧಿಸಲು ತೆರಳಿದಾಗ ಸಿಪಿಐ ಶ್ರೀಮಂತ್ ಇಲ್ಲಾಳ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇದೀಗ ಶ್ರೀಮಂತ್ ಇಲ್ಲಾಳ್ ಆರೋಗ್ಯ ವಿಚಾರಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಮಣಿಪಾಲ್ ಆಸ್ಪತ್ರೆಗೆ ಧಾವಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಗಾಂಜಾ ಆರೋಪಿಗಳನ್ನು ಬಂಧಿಸಲು ತೆರಳಿದಾಗ ಸಿಪಿಐ ಶ್ರೀಮಂತ್ ಇಲ್ಲಾಳ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಮೂಲಗಳು ಮಾಹಿತಿ ನೀಡಿದೆ.
ಗಾಂಜಾ ದಂಧೆ ಕೇಸ್ನಲ್ಲಿ ಗಾಂಜಾ ದಂಧೆ ಬೇಧಿಸಲು ಸಿಪಿಐ ಶ್ರೀಮಂತ ಇಲ್ಲಾಳ್ ನೇತೃತ್ವದಲ್ಲಿ 10 ಜನರ ಪೊಲೀಸ್ ತಂಡ ಮಹಾರಾಷ್ಟ್ರಕ್ಕೆ ಹೋಗಿತ್ತು. ಗಾಂಜಾ ಬೆಳೆಯುವ ಹೊಲಗಳಿಗೆ ಹೋಗಿದ್ದ ಪೊಲೀಸರ ಮೇಲೆ ರಾತ್ರಿ 9:30ರ ವೇಳೆಗೆ ಸುಮಾರು 30-40 ಮಂದಿ ಗಾಂಜಾ ದಂಧೆಕೋರರು ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.. ದಾಳಿ ಮಾಡುತ್ತಿದ್ದಂತೆ ಸಿಪಿಐ ಶ್ರೀಮಂತ ಇಲ್ಲಾಳ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ವೇಳೆ ಶ್ರೀಮಂತ್ ತಲೆಗೆ ಪೆಟ್ಟು ಬಿದ್ದು ಗಂಭೀರ ಗಾಯಗಳಾಗಿತ್ತು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಕರಣ ಸಂಬಂಧ 40 ಮಂದಿ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ.
ಮೀಸಲಾತಿ ವಿಚಾರದಲ್ಲಿ ಬಿಜೆಪಿಯಿಂದ ರಾಜಕೀಯ ಇಚ್ಛಾಶಕ್ತಿ ಪ್ರದರ್ಶನ – BJP ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಮಾನ ಅವಕಾಶಗಳು ಅಗತ್ಯ – ಸಿಎಂ ಬಸವರಾಜ ಬೊಮ್ಮಾಯಿ