ಚಿತ್ರದುರ್ಗ : ಚಿತ್ರದುರ್ಗ ಗ್ರಾಮ ಪಂಚಾಯಿತಿಯಲ್ಲಿ (Chitradurga Grama panchayat) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಂಥಾಲಯದಲ್ಲಿ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಿ ದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತಣಿಗೆಹಳ್ಳಿ ಈ ಹುದ್ದೆಗಳು ಖಾಲಿ ಇದ್ದು, ಸ್ಥಳೀಯ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ
ಅರ್ಹತೆ : ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು. ಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿದ್ದು, ಪಿಡಿಒ/ಪಂಚಾಯತ್ ಕಾರ್ಯದರ್ಶಿ, ಮುಖ್ಯ ಗ್ರಂಥಾಲಯ ಅಧಿಕಾರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಚಿತ್ರದುರ್ಗ ಇಲ್ಲಿಗೆ ಅರ್ಜಿಯನ್ನು ಕಳುಹಿಸಬಹುದಾಗಿದೆ/ chitradurga.nic.in ಮೂಲಕ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಅಧಿಕೃತ ಅಧಿಸೂಚನೆಗಾಗಿ https://cdn.s3waas.gov.in/s3a8ecbabae151abacba7dbde04f761c37/uploads/2022/10/2022100349.pdf ವೀಕ್ಷಿಸಬಹುದಾಗಿದೆ.
‘ಮೊದಲು ರೈಲಿಗೆ ಟಿಪ್ಪು ಸುಲ್ತಾನ್ ಹೆಸರಿಟ್ಟಿದ್ದೇ ತಪ್ಪು’ : ಬಸವನಗೌಡ ಪಾಟೀಲ್ ಯತ್ನಾಳ್