ಬಳ್ಳಾರಿ: ಸರ್ಕಾರ ಎಸ್ ಸಿ, ಎಸ್,ಟಿ ಸಮುದಾಯ ಮೀಸಲಾತಿ ಹೆಚ್ಚಳ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.ನಗರದ ಜನತೆ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ಈ ವೇಳೆ ಮಾತನಾಡಿದ ಶಾಸಕ ಸೋಮಶೇಖರ ರೆಡ್ಡಿ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಶ್ರೀರಾಮುಲು ಅವರು ಕೊಟ್ಟ ಮಾತಿನಂತೆ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ. ಅದರಲ್ಲಿ ಎಸ್ಸಿ, ಎಸ್ಟಿ ಸಮಯದಾಯಕ್ಕೆ ಸಚಿವ ಶ್ರೀರಾಮುಲು ಕೊಟ್ಟ ಮಾತಿನಂತೆ ಮೀಸಲಾತಿ ಕೊಡಿಸಿದ್ದಾರೆ. ಶ್ರೀರಾಮುಲು ಮಾತು ಕೊಟ್ರೆ ಅದು ಶ್ರೀರಾಮ ಮಾತು ಕೊಟ್ಟಂತೆ ಎಂದರು.ಮೀಸಲಾತಿಯಿಂದ SC/ST ಸಮುದಾಯಕ್ಕೆ ಒಳ್ಳೆಯದಾಗಲಿದೆ. ಈ ಎರಡು ಸಮುದಾಯಗಳ ಮೀಸಲಾತಿಯನ್ನು ಹೆಚ್ಚಳ ಮಾಡಿರುವುದಕ್ಕೆ ಸ್ವಾಗತಿಸುತ್ತೇನೆ ಎಂದರು.