ಬೆಂಗಳೂರು : ರಾಜ್ಯದಲ್ಲಿ ಪರಿಶಿಷ್ಟ ಜಾತಿ (Schedule Caste) ಮತ್ತು ಪರಿಶಿಷ್ಟ ಪಂಗಡಗಳ (Schedule Tribes) ಮೀಸಲಾತಿ (Reservation) ಹೆಚ್ಚಳಕ್ಕೆ ಇಂದು ವಿಶೇಷ ಸಂಪುಟದಲ್ಲಿ ಒಪ್ಪಿಗೆ ಸೂಚಿಸಿದೆ. ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದ ಸಂಪುಟ ಶನಿವಾರ ಅನುಮೋದನೆ ನೀಡಿದೆ.
ಈ ಹಿನ್ನೆಲೆ ಬರೋಬ್ಬರಿ 241 ದಿನದಿಂದ ಪ್ರತಿಭಟನೆ ಮಾಡುತ್ತಿದ್ದ ವಾಲ್ಮೀಕಿ ಸ್ವಾಮೀಜಿಗಳು ಧರಣಿ ಕೈ ಬಿಟ್ಟಿದ್ದಾರೆ. 241 ದಿನಗಳಿಂದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಗಳು ಪ್ರತಿಭಟನೆ ನಡೆಸಿದ್ದರು. ನಂತರ ವಾಲ್ಮೀಕಿ ಸಮಾಜದ ಮುಖಂಡರು ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ಈ ವೇಳೆ ಸಿಎಂ ಬೊಮ್ಮಾಯಿ ಅವರಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಿದ ಸರ್ಕಾರದ ನಿರ್ಧಾರವನ್ನುವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಸ್ವಾಗತಿಸಿದ್ದಾರೆ. ಇಂದು ಬಸವರಾಜ ಬೊಮ್ಮಾಯಿ ಭೇಟಿಯಾಗಿ ಧನ್ಯವಾದ ಸಲ್ಲಿಸಿದ್ದಾರೆ. ಹಲವು ದಿನಗಳಿಂದ ಸರ್ಕಾರಕ್ಕೆ ಭೇಟಿ ಇಡಲಾಗಿತ್ತು. ಇದೀಗ ರಾಜ್ಯದಲ್ಲೆಡೆ ಸಂಭ್ರಮಾಚರಣೆ ನಡೆಸಲಾಗುತ್ತಿದೆ.
BIGG NEWS: SC,ST ಸಮುದಾಯಕ್ಕೆ ಮೀಸಲಾತಿ ಹೆಚ್ಚಳ; ಬಳ್ಳಾರಿಯಲ್ಲಿ ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮ