ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೆಪ್ಟೆಂಬರ್ –ಅಕ್ಟೋಬರ್ ತಿಂಗಳ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ 205,94,25000 ಕೋಟಿ ರೂ. ಬಿಡುಗಡೆ ಮಾಡಿದೆ.
2021-22 ನೇ ಸಾಲಿನ ವಿವಿಧ ವಿಷಯಗಳಿಗೆ ಈ ಅನುದಾನವನ್ನು ಸರ್ಕಾರದ ಆದೇಶಗಳನ್ವಯ ಅತಿಥಿ ಉಪನ್ಯಾಸಕರಾಗಿ ನೇಮಕವಾಗಿ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಯಿಂದ ಅನುಮೋದನೆಗೊಂಡಿರುವ ಅತಿಥಿ ಉಪನ್ಯಾಸಕರಿಗೆ ಮಾತ್ರ ಪಾವತಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.
ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಗೌರವಧನ ಪಾವತಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿಂದಿನ ಕಾಲೇಜುಗಳಲ್ಲಿ ಬಳಕೆ ಮಾಡಿದರೆ ಗೌರವಧನವನ್ನು ಪಾವತಿಸದ್ದಲ್ಲಿ ಪ್ರಾಂಶುಪಾಲರನ್ನೇ ನೇರ ಹೊಣೆಗಾರರಾಗಿ ಮಾಡಲಾಗುತ್ತದೆ.