ನವದೆಹಲಿ : ಕರುನಾಡ ರತ್ನ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಕನಸಿನ ಕೂಸು ಗಂಧದ ಗುಡಿ (Gandhada Gudi) ಸಾಕ್ಷ್ಯಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಟ್ರೈಲರ್ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
ಟ್ವೀಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಪ್ಪು ಪ್ರಪಂಚದಾದ್ಯಂತದ ಲಕ್ಷಾಂತರ ಜನರ ಹೃದಯಗಳಲ್ಲಿ ವಾಸಿಸಿದ್ದಾರೆ. ಅವರು ಪ್ರತಿಭಾವಂತ ವ್ಯಕ್ತಿಯಾಗಿದ್ದರು, ಪುನೀತ್ ರಾಜ್ ಕುಮಾರ್ ಅಪ್ರತಿಮ ಪ್ರತಿಭಾವಂತರಾಗಿದ್ದರು. ಗಂಧದಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಸಲ್ಲಿಸುವ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು.
Appu lives in the hearts of millions around the world. He was brilliance personified, full of energy and blessed with unparalleled talent. #GandhadaGudi is a tribute to Mother Nature, Karnataka's natural beauty and environmental conservation. My best wishes for this endeavour. https://t.co/VTimdGmDAM
— Narendra Modi (@narendramodi) October 9, 2022