ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ( Vidhansabha election) ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಲರ್ಟ್ ಆಗಿದ್ದು, ಜನಸಂಕಲ್ಪ ಯಾತ್ರೆ ನಡೆಸಲು ಬಿಜೆಪಿ (BJP) ಭರ್ಜರಿ ಸಿದ್ದತೆ ನಡೆಸುತ್ತಿದೆ. ಅಕ್ಟೋಬರ್ 11 ರಿಂದ ಕ್ಷೇತ್ರ ಸಂಚಾರಕ್ಕೆ ಬಿಜೆಪಿ ಸಿದ್ದವಾಗಿದೆ.
2024 ರ ಚುನಾವಣೆಗೆ ಬಿಜೆಪಿ ಸಜ್ಜು: 144 ಲೋಕಸಭಾ ಕ್ಷೇತ್ರಗಳಲ್ಲಿ ರ್ಯಾಲಿ ನಡೆಸಲಿರುವ ಪ್ರಧಾನಿ ಮೋದಿ
ಹೌದು, ಕಾಂಗ್ರೆಸ್ ಇತ್ತ ಕಡೆ ರಾಷ್ಟ್ರಮಟ್ಟದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದರೆ, ಇನ್ನೊಂದು ಕಡೆ ರಾಜ್ಯ ಬಿಜೆಪಿ ನಾಯಕರು ಜನಸಂಕಲ್ಪ ಯಾತ್ರೆ ನಡೆಸಲು ಸಿದ್ದರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ( Basavaraj Bommai ) ಮಾಜಿ ಸಿಎಂ ಯಡಿಯೂರಪ್ಪ ( B.S Yadiyurappa) ನೇತೃತ್ವದಲ್ಲಿ ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಿಂದ ಅ. 11 ರಂದು ಬಿಜೆಪಿ ಸಂಕಲ್ಪ ಯಾತ್ರೆ ಹೊರಡಲಿದೆ. ಈ ಹಿನ್ನೆಲೆ ಆ. 11 ರಂದು ಗ್ರಾಮದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ರಾಯಚೂರಿನಿಂದ ಮುಖ್ಯಮಂತ್ರಿಗಳ ಚುನಾವಣಾ ಪ್ರಚಾರ ಆರಂಭವಾಗಲಿದ್ದು, ಮಾಜಿ ಸಿಎಂ ಯಡಿಯೂರಪ್ಪಅವರೊಂದಿಗೆ ಸಿಎಂ ಬೊಮ್ಮಾಯಿ ಯಾತ್ರೆ ಕೈಗೊಂಡಿದ್ದಾರೆ. ರಾಜ್ಯದ 100 ವಿಧಾನಸಭೆ ಕ್ಷೇತ್ರಗಳಲ್ಲಿ ಯಾತ್ರೆ ಸಮಾವೇಶ ನಡೆಸಲಾಗುವುದು, ಪಕ್ಷದ ರಾಜ್ಯಾಧ್ಯಕ್ಷ ನೇತೃತ್ವದ ಮತ್ತೊಂದು ತಂಡ 100 ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಳ್ಳಲಿದೆ ಎಂದು ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿ್ಪ್ಪರಾಜು ಹವಾಲ್ದಾರ್ ಮಾಹಿತಿ ನೀಡಿದ್ದಾರೆ.
ಅ. 30 ರಂದು ಕಲಬುರಗಿಯಲ್ಲಿ ಒಬಿಸಿ ಸಮಾವೇಶ, ಮೈಸೂರಿನಲ್ಲಿ ಎಸ್ಸಿ ಮೋರ್ಚಾ ಸಮಾವೇಶ, ಹುಬ್ಬಳ್ಳಿಯಲ್ಲಿ ರೈತ ಮೋರ್ಚಾ ಸಮಾವೇಶ, ಬಳ್ಳಾರಿಯಲ್ಲಿ ಎಸ್ಟಿ ಮೋರ್ಚಾ ಸಮಾವೇಶ ಆಯೋಜಿಸಲಾಗಿದ್ದು, ಬರೋಬ್ಬರಿ 10 ಲಕ್ಷ ಜನರು ಸೇರುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.