ಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಸ್ ಹತ್ತುವಾಗ ಕೆಳಗೆ ಬಿದ್ದ ಯುವತಿಯನ್ನು ಗಮನಿಸದೇ ಚಾಲಕ ಬಸ್ ಮುಂದಕ್ಕೆ ಚಲಾಯಿಸಿ ಅಜಾಗರೂಕತೆ ತೋರಿದ್ದಾನೆ. ಈ ಹಿನ್ನೆಲೆ ಯುವತಿ ಸೊಂಟದ ಮೇಲೆ ಬಸ್ ಹರಿದಿದ್ದು, ವಿದ್ಯಾರ್ಥಿನಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಕೋಲಾರ ಮೂಲದ ಶಿಲ್ಪ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಮೊದಲ ವರ್ಷದ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.