ಹಾಸನ: ಜಿಲ್ಲೆಯ ಪ್ರಸಿದ್ಧ ದೇವತೆ ಹಾಸನಾಂಬ ದೇವಸ್ಥಾನ ( Hasanamba Temple ) ದರ್ಶನಕ್ಕೆ ದಿನಾಂಕವನ್ನು ನಿಗದಿ ಪಡಿಸಲಾಗಿದೆ. ಅಕ್ಟೋಬರ್ 13 ರಿಂದ 27ರವರೆಗೆ ಹಾಸನಾಂಬ ದರ್ಶನಕ್ಕೆ ಭಕ್ತರಿಗೆ ಅವಕಾಶ ಸಿಗಲಿದೆ.
ಈ ಹಿನ್ನೆಲೆ ಇಂದು ದೇವಿಯ ಒಡವೆಗಳನ್ನು ದೇವಾಲಯಕ್ಕೆ ಕೊಂಡೊಯ್ಯಲಾಯಿತು. ಹಾಸನ ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ಹೊರತಂದು ಅಡ್ಡ ಪಲ್ಲಕ್ಕಿಯಲ್ಲಿ ಇರಿಸಲಾಯಿತು. ಈ ವೇಳೆ ಭಕ್ತರು ಹಾಸನಾಂಬೆ ದೇವಿಗೆ ಜೈಕಾರ ಕೂಗಿದರು. ಬೆಳ್ಳಿ ರಥದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಹಾಸನಾಂಬೆ ದೇಗುಲಕ್ಕೆ ತರಲಾಯಿತು.
ಕಳೆದ ಮೂರು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಅದ್ಧೂರಿಯಾಗಿ ಹಾಸನಾಂಬೆ ಜಾತ್ರಾ ಮಹೋತ್ಸವ ನಡೆದಿರಲಿಲ್ಲ. ಈ ವರ್ಷ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ.
ಇನ್ನೂ ಅಕ್ಟೋಬರ್ 13 ರಿಂದ 27ರವರೆಗೆ ಹಾಸನಾಂಬೆ ತಾಯಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಒಟ್ಟು 12 ದಿನಗಳ ಕಾಲ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಅಧಿದೇವತೆಯ ದರ್ಶನವನ್ನು ಭಕ್ತರು (Devotees) ಪಡೆಯಬಹುದಾಗಿದೆ. ಒಟ್ಟು 12 ದಿನಗಳ ಕಾಲ ದೇವಾಲಯ (Temple) ತೆರೆಯಲಿದೆ. ಆಶ್ವಿಜ ಮಾಸದ ಶುಕ್ಲ ಪಕ್ಷದ ಮೊದಲ ಗುರುವಾರದಂದು ಹಾಸನಾಂಬೆಯ ಬಾಗಿಲು ತೆರೆಯಲಿದ್ದು, ಬಲಿಪಾಡ್ಯಮಿಯ ಮಾರನೇಯ ದಿನ ಶಾಸ್ತ್ರೋಕ್ತವಾಗಿ ಗರ್ಭಗುಡಿಗೆ ಬಾಗಿಲು ಹಾಕಲಾಗುತ್ತದೆ. ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾಧಿಕಾರಿಗಳು ಬಾಗಿಲು ತೆರೆಯುವ ಮತ್ತು ಮುಚ್ಚುವ ವೇಳೆ ಉಪಸ್ಥಿತರಿರುತ್ತಾರೆ. ಕಳೆದ ಎರಡು ವರ್ಷ ಕೊರೊನಾ (COVID 19) ಹಿನ್ನೆಲೆ ಭಕ್ತರಿಗೆ ಹಲವು ನಿಬಂಧನೆಗಳನ್ನು ಹಾಕಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ಹಾಸನಾಂಬೆ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ.
ದೇಶದಲ್ಲಿ ನಿಜವಾದ ಅಲ್ಪಸಂಖ್ಯಾತರು ಅಂದರೆ ಬ್ರಾಹ್ಮಣ ಸಮುದಾಯ : ಬಸನಗೌಡ ಪಾಟೀಲ್ ಯತ್ನಾಳ್