ಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಸಂಬಂಧ ಚಾಲಕ ಸುರೇಶ್ ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
ಬಸ್ ಹತ್ತುವಾಗ ಕೆಳಗೆ ಬಿದ್ದ ಯುವತಿಯನ್ನು ಗಮನಿಸದೇ ಚಾಲಕ ಬಸ್ ಮುಂದಕ್ಕೆ ಚಲಾಯಿಸಿ ಅಜಾಗರೂಕತೆ ತೋರಿದ್ದಾನೆ. ಈ ಹಿನ್ನೆಲೆ ಯುವತಿ ಸೊಂಟದ ಮೇಲೆ ಬಸ್ ಹರಿದಿದ್ದು, ವಿದ್ಯಾರ್ಥಿನಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಕೋಲಾರ ಮೂಲದ ಶಿಲ್ಪ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಮೊದಲ ವರ್ಷದ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
ಅ.13 ರಿಂದ 27 ರವರೆಗೆ ಹಾಸನಾಂಬೆ ದರ್ಶನ : ದೇವಿಯ ಆಭರಣ ಖಜಾನೆಯಿಂದ ದೇಗುಲಕ್ಕೆ ಆಗಮನ |Hasanambe Temple