ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರ ಎರಡು ದಿನ ವಿಸ್ತರಣೆಯಾಗಲಿದೆ ಎಂದು ಸೆಸ್ಕ್ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ದಸರಾ ಮಹೋತ್ಸವದಅಂಗವಾಗಿ ನಗರದಲ್ಲಿ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಿಗೆ ಮಾಡಿರುವ ವಿದ್ಯುತ್ ದೀಪಲಂಕಾರವನ್ನು ಅ.12 ರವರೆಗೆ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ಸೆಸ್ಕ್ ನಿರ್ದೇಶಕ ಜಯವಿಭವಸ್ವಾಮಿ ಹಾಗೂ ದಸರಾ ವಿದ್ಯುತ್ ದೀಪಾಲಂಕಾರ ಉಪ ಸಮಿತಿ ಅಧ್ಯಕ್ಷ ಟಿ. ರಮೇಶ್ ಮಾಹಿತಿ ನೀಡಿದ್ದಾರೆ.
ಅ. 11 ರಿಂದ 12 ರವರೆಗೆ ಮೈಸೂರು ದಸರಾ ವಿದ್ಯುತ್ ದೀಪಾಲಂಕಾರ ಮುಂದುವರೆಯಲಿದೆ. ದಸರಾ ಹಿನ್ನೆಲೆ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪ, ಬಣ್ಣ ಬಣ್ಣದ ಲೈಂಟಿಗ್ಸ್ ಹಾಕಲಾಗಿತ್ತು. ಇದರಿಂದ ಮೈಸೂರು ನಗರ ಝಗಮಗಿಸುತ್ತಿತ್ತು. ಲಕ್ಷಾಂತರ ಮಂದಿ ಪ್ರವಾಸಿಗರು ಇದನ್ನು ಕಣ್ತುಂಬಿಕೊಂಡಿದ್ದರು. ಇದೀಗ ಎರಡು ದಿನ ದಸರಾ ವಿದ್ಯುತ್ ದೀಪಾಲಂಕಾರ ವಿಸ್ತರಣೆ ಮಾಡಲಾಗಿದ್ದು, ಈ ಮೂಲಕ ಪ್ರವಾಸಿಗರು, ಮೈಸೂರಿನ ಜನತೆ ಇನ್ನೂ ಎರಡು ದಿನ ಮೈಸೂರು ವಿದ್ಯುತ್ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಬಹುದಾಗಿದೆ.