ಬೆಂಗಳೂರು : ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹಬ್ಬದ ಮುಂಗಡ ಮಂಜೂರು ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಕುರಿತು ಪ್ರೌಢಶಿಕ್ಷಣ ಮಂಡಳಿಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಸರ್ಕಾರದ ಆದೇಶದಲ್ಲಿ ಕರ್ನಾಟಕ ಶಿಕ್ಷಣ ಕಾಯಿದೆ 1999ರಅನುಬಂಧ 11 ರ ಕ್ರಮ ಸಂಖ್ಯೆ 04 ರಂತೆ ಅವಕಾಶವಿದ್ದರಿಂದ ಸದರಿ ನಿಯಮಾವಳಿಗಳಿಗೆ ಸೂಕ್ತ ತಿದ್ದುಪಡಿ ಮಾಡುವುದನ್ನು ಕಾಯ್ದಿರಿಸಿ ಷರತ್ತಿಗೆ ಒಳಪಟ್ಟು ಈ ಕೂಡಲೇ ಜಾರಿಗೆ ಬರುವಂತೆ ಅನುದಾನಿತ ಶಾಲೆಗಳ ಸಿಬ್ಬಂದಿಗಳಿಗೆ ಹಬ್ಬದ ಮುಂಗಡ ಮಂಜೂರು ಮಾಡಲು ಅನುಮತಿ ನೀಡಿದ್ದಾರೆ.