ಬೆಂಗಳೂರು: ಇಂಧನ ದರ ಹೊಂದಾಣಿಕೆ ಹಿನ್ನೆಲೆಯಲ್ಲಿ ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ಸರ್ಕಾರ ಪರಿಷ್ಕೃತ ಆದೇಶವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲು ಚಿಂತನೆ ನಡೆಸಿದೆ.
Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : 19 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ
ಇಂಧನ ವೆಚ್ಚ ಹೊಂದಾಣಿಕೆ ನೆಪದಲ್ಲಿ ಈಚೆಗೆ ಮಾಡಲಾದ ವಿದ್ಯುತ್ ದರ ಹೆಚ್ಚಳಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಹೊರೆ ತಗ್ಗಿಸುವ ಚಿಂತನೆ ಸರಕಾರದ ಮಟ್ಟದಲ್ಲಿ ಆರಂಭ ವಾಗಿದ್ದು, ಇಂಧನ ದರ ಹೊಂದಾಣಿಕೆ ಹಿನ್ನೆಲೆಯಲ್ಲಿ ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ಸರ್ಕಾರ ಪರಿಷ್ಕೃತ ಆದೇಶವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಏಳು ತಿಂಗಳ ಅಂತರದಲ್ಲಿ ಎರಡು ಬಾರಿ ವಿದ್ಯುತ್ ದರ ಹೆಚ್ಚಿಸಲಾಗಿತ್ತು. ಇಂಧನ ವೆಚ್ಚ ಹೊಂದಾಣಿಕೆಗಾಗಿ ಬೆಸ್ಕಾಂ ವ್ಯಾಪ್ತಿಯಲ್ಲಿ ಯೂನಿಟ್ಗೆ 43 ಪೈಸೆ ಏರಿಸಲಾಗಿತ್ತು. ಇತರ ಎಸ್ಕಾಂ ಗಳಲ್ಲಿ ದರ ಪರಿಷ್ಕರಿಸಲಾಗಿತ್ತು. ಇದಕ್ಕೆ ಕೈಗಾರಿಕೆ ಸಹಿತ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ ಹೀಗಾಗಿ ಇಂಧನ ದರ ಇಳಿಕೆಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.