ಹೋಸಪೇಟೆ : ಸರ್ಕಾರಿ ಇನಾಂ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಾಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರೈತರಿಗೆ ಸಕ್ರಮಗೊಳಿಸಲು ನಮೂನೆ 57ರಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಲು ಅವಕಾಶ ನೀಡಿದೆ.
ವಿಜಯನಗರ ಜಿಲ್ಲೆಯ ಸರ್ಕಾರಿ ಜಮೀನುಗಳಲ್ಲಿ ಅನಧೀಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94-ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57ರಲ್ಲಿ ಅರ್ಜಿಯನ್ನು ಸ್ವೀಕರಿಸಲು 01 ವರ್ಷದವರೆಗೆ ಕಾಲವಕಾಶವನ್ನು ವಿಸ್ತರಿಸಲಾಗಿದೆ ಎಂದು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್.ಪಿ ಅವರು ತಿಳಿಸಿದ್ದಾರೆ.
ನಮೂನೆ-57ರಲ್ಲಿ ಅರ್ಜಿಗಳನ್ನು ಸ್ವೀಕರಿಸಲು https://landrecords.karnataka.gov.in/service73/login.aspxರಲ್ಲಿ ತಾಂತ್ರಿಕ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಸದರಿ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
BIG NEWS : ಉಕ್ರೇನ್ ಮೇಲೆ 84 ಕ್ಷಿಪಣಿಗಳನ್ನು ಉಡಾಯಿಸಿದ ರಷ್ಯಾ: 10 ಮಂದಿ ಸಾವು, ಹಲವರಿಗೆ ಗಾಯ
BIGG NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಶೀಘ್ರವೇ ವಿದ್ಯುತ್ ದರ ಇಳಿಕೆ?