ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ(Manik Bhattacharya) ಅವರನ್ನು ಜಾರಿ ನಿರ್ದೇಶನಾಲಯವು ರಾತ್ರೋರಾತ್ರಿ ವಿಚಾರಣೆ ನಡೆಸಿದ ನಂತರ ಇಂದು ಮುಂಜಾನೆ ಬಂಧಿಸಿದೆ.
ಮೂಲಗಳ ಪ್ರಕಾರ, ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ರಾತ್ರೋರಾತ್ರಿ ವಿಚಾರಣೆ ನಡೆಸಿದ ನಂತರ ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ಭಟ್ಟಾಚಾರ್ಯ ಅವರನ್ನು ಇಂದು ಬಂಧಿಸಲಾಗಿದೆ.
West Bengal | Former chairman of West Bengal Board of Primary Education & TMC MLA Manik Bhattacharya was arrested today after being questioned overnight by Enforcement Directorate on the School Service Commission (SSC) scam. He will be produced before the Court today.
— ANI (@ANI) October 11, 2022
ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಬಂಧನಕ್ಕೊಳಗಾದ ನಂತ್ರ ಎರಡನೇ ಆರೋಪಿ ಮಾಣಿಕ್ ಭಟ್ಟಾಚಾರ್ಯ ಇವರಾಗಿದ್ದಾರೆ.
ಈ ಹಿಂದೆ ಮಾಣಿಕ್ ಭಟ್ಟಾಚಾರ್ಯ ಅವರು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯ ಅಧ್ಯಕ್ಷರಾಗಿದ್ದರು. ಅವರ ಅಧಿಕಾರಾವಧಿಯಲ್ಲಿಯೇ ನೇಮಕಾತಿ ಹಗರಣ ನಡೆದಿದೆ ಎಂದು ಇಡಿ ಮೂಲಗಳು ಹೇಳಿವೆ.
Watch Video: ಕಾರು ನಿಲ್ಲಿಸಿ ಅಭಿಮಾನಿಯಿಂದ ತಾಯಿಯ ಫೋಟೋ ಸ್ವೀಕರಿಸಿದ ಪ್ರಧಾನಿ ಮೋದಿ!
BIG NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ : ಇಂದು, ನಾಳೆ ಯೆಲ್ಲೋ ಅಲರ್ಟ್ | Bengaluru Rain