ಬೆಂಗಳೂರು : ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕುಮಾರಸ್ವಾಮಿ ಲೇಔಟ್ನ ಸಾಗರ್ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದಾರೆ. ಕಳೆದ 7 ದಿನಗಳಿಂದ ಲೋಹಿತಾಶ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗುತ್ತಿದೆ. ಕೆಲವೇ ಕ್ಷಣಗಳಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ಯನ್ನು ಆಸ್ಪತ್ರೆ ನೀಡಲಾಗಿದೆ.
ಲೋಹಿತಾಶ್ವ ಟಿ.ಎಸ್ ಕಿರುಪರಿಚಯ ;
ಕನ್ನಡ ಚಲನಚಿತ್ರ ನಟ ಮತ್ತು ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾರೆ. ಅವರು ಐನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳು, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ತಮ್ಮ ಪ್ರಾಬಲ್ಯದ ಧ್ವನಿಗೆ ಜನಪ್ರಿಯರಾಗಿದ್ದಾರೆ. ಅವರ ಮಗ ನಟ ಶರತ್ ಲೋಹಿತಾಶ್ವ ಕನ್ನಡ ಸಿನಿಮಾರಂಗದಲ್ಲಿ ಜನಪ್ರಿಯ ಖಳನಟರಾಗಿ ಮಿಂಚುತ್ತಿದ್ದಾರೆ.
ತಮ್ಮ ಕಂಚಿನ ಕಂಠ, ಪ್ರಬುದ್ಧ ನಟನೆಯ ಮೂಲಕ ಕನ್ನಡ ಸಿನಿಪ್ರಿಯರ ನೆನಪಲ್ಲಿ ಅಚ್ಚಳಯದೇ ಉಳಿದಿರುವ ನಟ ಲೋಹಿತಾಶ್ವ. ತುಮಕೂರಿನ ತೊಂಡಗೆರೆಯಲ್ಲಿ 1939 ರಲ್ಲಿ ಜನಿಸಿದ ಇವರು ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರು.ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿರುವ ಇವರು ಕೆಲವು ಕಿರುತೆರೆ ಧಾರಾವಾಹಿಗಳಲ್ಲಿ , ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇಂಗ್ಲೀಷ್ ಸಾಹಿತ್ಯದಲ್ಲಿ ಮೈಸೂರು ಯುನಿವರ್ಸಿಟಿಯಿಂದ ಪಿ.ಹೆಚ್.ಡಿ ಪಡೆದಿರುವ ಇವರು ಕೆಲವು ನಾಟಕಗಳು, ಕವನ ಸಂಕಲನ, ಕಥಾ ಸಂಕಲನ ಬರೆದಿದ್ದಾರೆ.ಇವರ ಮಗ ಶರತ್ ಲೋಹಿತಾಶ್ವ ಕೂಡ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.