ಬೆಂಗಳೂರು : 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣ ಸಂಬಂಧ ಬಂಧಿತರಾದವರ ಮೇಲೆ ಸಿಐಡಿ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ.
ಪಿಎಸ್ ಐ ನೇಮಕಾತಿ ಪ್ರಕರಣವನ್ನು ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಪಿಎಸ್ಐ ನೇಮಕಾತಿ ಹಗರಣದ ಕೇಸ್ನಲ್ಲಿ ಪಿ.ಸಿ. ಆಕ್ಟ್(ಪ್ರಿವೆನ್ಷನ್ ಆಫ್ ಕರಪ್ಷನ್ ಆಕ್ಟ್. ಭ್ರಷ್ಟಾಚಾರ ತಡೆ ಕಾಯ್ದೆ) ಅಳವಡಿಸಲಾಗಿದೆ.
ಪಿಎಸ್ಐ ನೇಮಕಾತಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿರುವುದು ದೃಡಪಟ್ಟಿದೆ. ಪಿಎಸ್ಐ ನೇಮಕಾತಿಗಾಗಿಯೇ ಪಡೆದಿದ್ದ ಸುಮಾರು 1.5 ಕೋಟಿಗೂ ಹೆಚ್ಚಿನ ಹಣ ಪತ್ತೆಯಾಗಿದೆ. ಹೀಗಾಗಿ ಲಂಚ ನೀಡಿದವರು ಹಾಗೂ ಲಂಚ ಪಡೆದವರ ವಿರುದ್ಧ ಹೊಸ ಸೆಕ್ಷನ್ ಅಡಿಯಲ್ಲಿ ಸಹ ತನಿಖೆ ನಡೆಸಲು ಸಿಐಡಿ ಪೊಲೀಸರು ಮುಂದಾಗಿದ್ದಾರೆ.