ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಬಿಜೆಪಿ ಈಗಾಗಲೇ ಜನಸಂಕಲ್ಪ ಯಾತ್ರೆಗೆ ಚಾಲನೆ ನೀಡಿದೆ. ಈ ನಡುವೆ ವಿಜಯನಗರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ದಲಿತರ ಮನೆಯೊಂದರಲ್ಲಿ ಉಪಹಾರ ಸೇವಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಚಾಲನೆ ನೀಡಲಾಗಿದೆ. ಈ ನಡುವೆ ಇಂದು ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಜಯನಗರದಲ್ಲಿ ದಲಿತ ಮನೆಯೊಂದರಲ್ಲಿ ಕುಟುಂಬದಲ್ಲಿ ಉಪಾಹಾರ ಸೇವಿಸಿದ್ದಾರೆ.
ವಿಜಯನಗರ ಜಿಲ್ಲೆಯ ಕಮಲಾಪುರ ಗ್ರಾಮದ ಅಂಬೇಡ್ಕರ್ ಕಾಲೋನಿಯ ಹಿರಾಳ ಕೊಲ್ಲಾರಪ್ಪ ಎಂಬುವರ ಮನೆಗೆ ತೆರಳಿದ ಸಿಎಂ ಬೊಮ್ಮಾಯಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಬೆಳಗಿನ ಉಪಹಾರ ಮಾಡಿದ್ದಾರೆ. ಬಳಿಕ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಆನಂದ್ ಸಿಂಗ್, ಗೋವಿಂದ ಕಾರಜೋಳ ಹಾಜರಿದ್ದರು.
ಬಿಜೆಪಿ ಕರ್ನಾಟಕ #JanaSankaplaYatre ಯ ಅಂಗವಾಗಿ ಇಂದು ವಿಜಯನಗರ ಜಿಲ್ಲೆಯ ಕಮಲಾಪುರ ಗ್ರಾಮದ ದಲಿತ ಕುಟುಂಬ ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರಳಿ ಉಪಹಾರ ಸೇವಿಸಿ, ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದೆನು. ಈ ಸಂದರ್ಭದಲ್ಲಿ ಶ್ರೀ @BSYBJP ಹಾಗೂ ಇತರರು ಉಪಸ್ಥಿತರಿದ್ದರು. @BJP4Karnataka pic.twitter.com/nlMIbtM8rt
— Basavaraj S Bommai (@BSBommai) October 12, 2022