ಚಿತ್ರದುರ್ಗ : ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಪಾದಯಾತ್ರೆ ಚಿತ್ರದುರ್ಗ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಈ ಬೆನ್ನಲ್ಲೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ವಾರ್ ಶುರುವಾಗಿದೆ
ಮೊಳಕಾಲ್ಮೂರಿನಲ್ಲಿ ರಾಹುಲ್ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಪಿಎಫ್ಐ ಭಾಗ್ಯ ಅಂತ ಪೋಸ್ಟರ್ ಅಂಟಿಸಿದ್ದಾರೆ. ಇಡೀ ವಿಧಾನಸಭಾ ಕ್ಷೇತ್ರದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ಶುರುಮಾಡಿದ್ದಾರೆ. ಇದು ಕಾಂಗ್ರೆಸ್ ನಾಯಕ ಕೆಂಗಣ್ಣಿಗೆ ಗುರಿಯಾಗಿದಂತೂ ನಿಜ.
ಈ ಹಿನ್ನೆಲೆಯಲ್ಲಿ ಪಾದಯಾತ್ರೆ ಮಾರ್ಗದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಪರುಶುರಾಮ್ ಮಾಹಿತಿ ನೀಡಿದ್ದಾರೆ. ವಾಹನ ಸವಾರರಿಗೆ ತೊಂದರೆ ಆಗಬಾರದೆಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾರ್ಗಗಳ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಭಾರತ್ ಜೋಡೋ ಪಾದಯಾತ್ರೆಗೆ ಇಬ್ಬರು ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ 7 ಡಿವೈಎಸ್ಪಿ, 29 ಪಿಐ, 89 ಪಿಎಸ್ಐ, 5 ಕೆಎಸ್ಆರ್ಪಿ, 7 ಡಿಆರ್ ತುಕಡಿಗಳು ಕರ್ತವ್ಯ ನಿರ್ವಹಿಸಲಿವೆ. ಯಾತ್ರೆ ಸಾಗುವ ಮಾರ್ಗದಲ್ಲಿ ಭದ್ರತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲವು ಕಡೆ ನಿರ್ಬಂಧ ಹೇರಲಾಗಿದೆ. ಕೆಲವೆಡೆ ವಾಹನ ಸಂಚಾರ ನಿಷೇಧಿಸಿ, ಬದಲಿ ಮಾರ್ಗಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಮಾಹಿತಿ ನೀಡಿದ್ದಾರೆ.