ಬೆಂಗಳೂರು : ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನಲ್ಲಿ ಡಿನೋಟಿಫಿಕೇಶನ್ ಅಕ್ರಮ ಆರೋಪ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಸಿದ್ದಾಪುರ ಮತ್ತು ಭೂಪಸಂದ್ರದಲ್ಲಿ ಡಿ ನೋಟಿಫಿಕೇಶನ್ ಸಿದ್ದಾಪುರ-200 ಕೋಟಿ ಅಕ್ರಮ ಮತ್ತು ಭೂಪಸಂದ್ರದಲ್ಲಿ 350 ಕೋಟಿ ಅಕ್ರಮದ ಆರೋಪ ಕೇಳಿ ಬಂದಿತ್ತು. ಈಗ ಡಿನೋಟಿಫಿಕೇಶನ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳ ಸಮೇತ ಬಿಜೆಪಿ ನಾಯಕ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ.