ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಹುಬ್ಬಳ್ಳಿಯಿಂದ ದೆಹಲಿಗೆ ಪ್ರತಿನಿತ್ಯ ವಿಮಾನ ಸೇವೆ ಕಲ್ಪಿಸಲು ಇಂಡಿಗೋ ಏರ್ ಲೈನ್ಸ್ (IndiGo Flight) ಸಿದ್ದಾಗಿದೆ.
ಹೌದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತುಕತೆ ನಡೆಸಿದ್ದು ಒಪ್ಪಿಗೆ ಕೂಡ ಸಿಕ್ಕಿದೆ. ಇದರಿಂದಾಗಿ ಇನ್ಮುಂದೆ ಪ್ರತಿನಿತ್ಯ ಹುಬ್ಬಳ್ಳಿಯಿಂದ ದೆಹಲಿಗೆ ಇಂಡಿಗೋ ಏರ್ ಲೈನ್ಸ್ ನಲ್ಲಿ ಪ್ರಯಾಣ ಸಾಧ್ಯವಾಗಲಿದೆ ಎಂದರು.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಸಚಿವರು ಹುಬ್ಬಳ್ಳಿ-ಧಾರವಾಡದ ಜನತೆಗೆ ಸಿಹಿ ಸುದ್ದಿ. ಇಂಡಿಗೋ ಏರ್ ಲೈನ್ಸ್ ಅಧಿಕಾರಿಗಳೊಂದಿಗೆ ಹುಬ್ಬಳ್ಳಿಯಿಂದ ದೆಹಲಿಗೆ ಪ್ರತಿ ನಿತ್ಯ ನೇರ ವಿಮಾನ ಸೇವೆ ಪ್ರಾರಂಭಿಸುವಂತೆ ಕೆಲವು ದಿನಗಳ ಹಿಂದೆ ಕೋರಿಕೊಳ್ಳಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅವರು ಇದೇ ನವೆಂಬರ್ 14, 2022ರಿಂದ ಪ್ರತಿ ನಿತ್ಯ ಈ ಸೇವೆ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಟಿಕೆಟ್ ಬುಕ್ಕಿಂಗ್ ಕೂಡ ಇಗಾಗಲೇ ಪ್ರಾರಂಭವಾಗಿದೆ. ಸೇವೆ ಪ್ರಾರಂಭಿಸಿದ ಇಂಡಿಗೋ ಆಡಳಿತ ಮಂಡಳಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ಹುಬ್ಬಳ್ಳಿ-ಧಾರವಾಡದ ಜನತೆಗೆ ಸಿಹಿ ಸುದ್ದಿ. ಇಂಡಿಗೋ ಏರ್ ಲೈನ್ಸ್ ಅಧಿಕಾರಿಗಳೊಂದಿಗೆ ಹುಬ್ಬಳ್ಳಿಯಿಂದ ದೆಹಲಿಗೆ ಪ್ರತಿ ನಿತ್ಯ ನೇರ ವಿಮಾನ ಸೇವೆ ಪ್ರಾರಂಭಿಸುವಂತೆ ಕೆಲವು ದಿನಗಳ ಹಿಂದೆ ಕೋರಿಕೊಳ್ಳಲಾಗಿತ್ತು.
— Pralhad Joshi (@JoshiPralhad) October 12, 2022
‘ಯಂಕ-ಸೀನಾ-ನಾಣಿ’ಯಂತೆ, BSY, ಬೊಮ್ಮಾಯಿ, ಕಟೀಲ್ ಜನಸಂಕಲ್ಪ ಯಾತ್ರೆ ಕೈಗೊಂಡಿದ್ದಾರೆ – ದಿನೇಶ್ ಗುಂಡೂರಾವ್ ವ್ಯಂಗ್ಯ
‘ಸಿದ್ದರಾಮಣ್ಣನಿಗೆ ಈಗ ಅರಳು ಮರಳು ‘: ಸಿಎಂ ಬೊಮ್ಮಾಯಿ ವಾಗ್ಧಾಳಿ |Basavaraj Bommai