ಉಡುಪಿ: ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಯವರನ್ನು ಅವರ ನಿವಾಸದಲ್ಲಿ ಸೌಹಾರ್ದ ಭೇಟಿ ಮಾಡಿದರು.
BIGG NEWS: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಗ್ಯ ವಿಚಾರಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ
ಈ ವೇಳೆ ರಾಮಮಂದಿರ ಹೋರಾಟ ಮತ್ತು ಮಂದಿರ ನಿರ್ಮಾಣ ಕಾರ್ಯದ ಪ್ರಗತಿ ಬಗ್ಗೆ ಮಾತನಾಡಿದರು. ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ಪೇಜಾವರಶ್ರೀ ತಿಳಿಸಿದರು. ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿಯವರ ಪಾತ್ರವನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು ಭವ್ಯ ರಾಮಮಂದಿರ ನಿರ್ಮಾಣಗೊಳ್ಳುವಂತಾಗಿದೆ. ದೇವರು ನಿರ್ಮಾಣ ಪ್ರಗತಿಯಲ್ಲಿದ್ದು, ಇನ್ನೊಂದು ವರ್ಷದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳುವುದಾಗಿ ಹೇಳಿದರು.
ವಿಶ್ವೇಶತೀರ್ಥ ಶ್ರೀಪಾದರು ತಮಗೆ ನೀಡಿದ ಸ್ಫೂರ್ತಿಯನ್ನು ಎಲ್.ಕೆ. ಅಡ್ವಾಣಿ ಸ್ಮರಿಸಿದರು. ಆ ಕಾಲದ ದಿನಗಳನ್ನು ನೆನೆದರು.