ಬೆಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಚೆಂದನವನದ ಹಿರಿಯ ನಟ ಲೋಹಿತಾಶ್ವ ( Actor Lohitashwa ) ಅವರು, ಹೃದಯಾಘಾತಕ್ಕೆ ಒಳಗಾಗಿದ್ದರು. ಹೀಗೆ ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವಂತ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರಗೊಂಡಿರೋದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಈ ಕುರಿತಂತೆ ಇದೀಗ (ಅ.12) ಸಾಗರ್ ಅಪಲೋ ಆಸ್ಪತ್ರೆಯ ವೈದ್ಯರು ಸ್ಯಾಂಡಲ್ ವುಡ್ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರಗೊಂಡಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ತಮ್ಮ ಕಂಚಿನ ಕಂಠ, ಪ್ರಬುದ್ಧ ನಟನೆಯ ಮೂಲಕ ಕನ್ನಡ ಸಿನಿಪ್ರಿಯರ ನೆನಪಲ್ಲಿ ಅಚ್ಚಳಯದೇ ಉಳಿದಿರುವ ನಟ ಲೋಹಿತಾಶ್ವ. ತುಮಕೂರಿನ ತೊಂಡಗೆರೆಯಲ್ಲಿ 1939 ರಲ್ಲಿ ಜನಿಸಿದ ಇವರು ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರು.ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿರುವ ಇವರು ಕೆಲವು ಕಿರುತೆರೆ ಧಾರಾವಾಹಿಗಳಲ್ಲಿ , ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇಂಗ್ಲೀಷ್ ಸಾಹಿತ್ಯದಲ್ಲಿ ಮೈಸೂರು ಯುನಿವರ್ಸಿಟಿಯಿಂದ ಪಿ.ಹೆಚ್.ಡಿ ಪಡೆದಿರುವ ಇವರು ಕೆಲವು ನಾಟಕಗಳು, ಕವನ ಸಂಕಲನ, ಕಥಾ ಸಂಕಲನ ಬರೆದಿದ್ದಾರೆ.ಇವರ ಮಗ ಶರತ್ ಲೋಹಿತಾಶ್ವ ಕೂಡ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
BREAKING NEWS : ‘ಹಿಜಾಬ್ ವಿವಾದ’ : ನಾಳೆ ಬೆಳಗ್ಗೆ 10:30 ಕ್ಕೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟ |Hijab Row