ಕಲಬುರಗಿ : ಪ್ರಸಕ್ತ 2022-23 ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿಯಿಂದ ಹಾಳಾದ ಬೆಳೆಗಳಿಗೆ ಭೂಮಿ ತಂತ್ರಾಂಶದಲ್ಲಿ ದಾಖಲಾಗಿರುವವರ ಪೈಕಿ ನಾಲ್ಕನೇ ಹಂತದ ರೂಪದಲ್ಲಿ ಜಿಲ್ಲೆಯ 45,456 ರೈತರಿಗೆ 38.64 ಕೋಟಿ ರೂ. ಬೆಳೆ ಪರಿಹಾರ ಬಿಡುಗಡೆಗೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಬುಧವಾರ ಅನುಮೋದನೆ ನೀಡಿದ್ದಾರೆ.
BIGG BREAKING NEWS : ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ : ಜನರಲ್ಲಿ ಹೆಚ್ಚಿದ ಆತಂಕ
ಕಳೆದ ಜುಲೈ-ಆಗಸ್ಟ್ ಮಾಹೆಯಲ್ಲಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ 1.70 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಯನ್ನು ಜಂಟಿ ಸಮೀಕ್ಷೆ ಮೂಲಕ ಅಂದಾಜಿಸಿ, ಬೆಳೆ ಪರಿಹಾರಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಈಗಾಗಲೆ ಮೂರು ಹಂತದಲ್ಲಿ 1,88,982 ರೈತರಿಗೆ 164.53 ಕೋಟಿ ರೂ. ಪರಿಹಾರ ನೀಡಲಾಗಿದ್ದು, ಇದೀಗ ಅನುಮೋದನೆ ನೀಡಿರುವ 45,456 ರೈತರಿಗೆ 38.64 ಕೋಟಿ ರೂ. ಸೇರಿದಂತೆ ಒಟ್ಟಾರೆ ನಾಲ್ಕು ಹಂತದಲ್ಲಿ 2,34,438 ರೈತರಿಗೆ 203.17 ಕೋಟಿ ರೂ. ಪರಿಹಾರ ನೀಡಿದಂತಾಗಿದೆ.
ಇದು ರಾಜ್ಯದಲ್ಲಿಯೇ ದಾಖಲೆ ಪ್ರಮಾಣದಲ್ಲಿ ಜಿಲ್ಲೆಗೆ ಅತಿ ಹೆಚ್ಚಿನ ಪರಿಹಾರ ಬಿಡುಗಡೆಯಾಗಿದೆ ಎಂದು ಡಿ.ಸಿ. ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.