ಮಂಡ್ಯ: ಜಿಲ್ಲೆಯ ಮಳವಳ್ಳಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಕ್ಯಾಂಡಲ್ ಮೆರವಣಿಗೆ ನಡೆಸಿದರು.
BIGG NEWS: 382 ಮರಗಳನ್ನು ಕಡಿಯಲು ವಿಮಾನ ನಿಲ್ದಾಣ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ BMRCL
ಈ ಪ್ರಕರಣದ ಕುರಿತು ಜಿಲ್ಲಾದ್ಯಂತ ವ್ಯಾಪಕ ಖಂಡಿಸಿದ್ದಾರೆ. ಮೃತ ಬಾಲಕಿಯ ಫೋಟೋ ಮುಂದೆ ಮೇಣದ ಬತ್ತಿ ಹಚ್ಚಿ ಸಂತಾಪ ಸೂಚಿಸಿದ್ದಾರೆ. ಇನ್ನು ಮೇಣದ ಬತ್ತಿ ಹಚ್ಚಿ ಸಾರ್ವಜನಿಕರು ರ್ಯಾಲಿ ನಡೆಸಿದರು. ಈ ವೇಳೆ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಸಾರ್ವಜನಿಕರು, ಸಂಘ, ಸಂಸ್ಥೆಗಳ ಒತ್ತಾಯಿಸಿವೆ. ಫೇಸ್ ಬುಕ್ ಮುಂತಾದ ಸಾರ್ವಜನಿಕ ಈ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ಬಗ್ಗೆ ಮಂಡ್ಯದ ಸಂಸದೆ ಸುಮಲತಾ ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದಾರೆ.