ಬೆಂಗಳೂರು : ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ (Supreme Court) ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ. ಹೈಕೋರ್ಟ್ ತೀರ್ಪಿನಂತೆ ಶಾಲೆಗಳು ನಡೆಯುತ್ತವೆ. ರಾಜ್ಯದಲ್ಲಿ ಈಗಿರುವ ನಿಯಮದಂತೆ ಮಕ್ಕಳು ಶಾಲೆಗೆ ಬರಬೇಕು. ಮುಂದಿನ ತೀರ್ಪು ಬರುವ ತನಕ ಕರ್ನಾಟಕದಲ್ಲಿ ಹೈಕೋರ್ಟ್ ತೀರ್ಪಿನಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಯಾವುದೇ ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ಹೇಳಿದ್ದಾರೆ.
ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯದ ಹಿನ್ನೆಲೆಯಲ್ಲಿ ಹಿಜಾಬ್ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ.
ಹೇಮಂತ್ ಗುಪ್ತಾ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿದ್ದಾರೆ. ನ್ಯಾಯಮೂರ್ತಿ ಸುಧಾಂಶ ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ರದ್ದುಗೊಳಿಸಿದ್ದಾರೆ. ಹಿಜಾಬ್ ವಿವಾದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೊಳಿಸಲಾಗಿದೆ.