ಉಡುಪಿ : ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ (Supreme Court) ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ
BIGG NEWS : ʻಹಿಜಾಬ್ ವಿವಾದಕ್ಕೆ ವಿಸ್ತ್ರತ ಪೀಠದ ತೀರ್ಪಿನ ಅಗತ್ಯವಿದೆ ʼ : ಪ್ರವೋದ್ ಮುತಾಲಿಕ್ ಪ್ರತಿಕ್ರಿಯೆ
ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಈಗಾಗಲೇ ಸೂಚನೆ ನೀಡಲಾಗಿದೆ. ವದಂತಿ ಹರಡುವವರ ವಿರುದ್ಧ ಕ್ರಮಕ್ಕೆ ಎಚ್ಚರಿಕೆ ನೀಡಲಾಗಿದೆ. ಎಂದು ಉಡುಪಿ ಪೊಲೀಸ್ ವರಿಷ್ಟಾಧಿಕಾರಿ ಅಕ್ಷಯ್ ಮಚ್ಚಿಂದ್ರ ಮಾಹಿತಿ ನೀಡಿದ್ದಾರೆ.
ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯದ ಹಿನ್ನೆಲೆಯಲ್ಲಿ ಹಿಜಾಬ್ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ.
BIGG NEWS : ʻಹಿಜಾಬ್ ವಿವಾದಕ್ಕೆ ವಿಸ್ತ್ರತ ಪೀಠದ ತೀರ್ಪಿನ ಅಗತ್ಯವಿದೆ ʼ : ಪ್ರವೋದ್ ಮುತಾಲಿಕ್ ಪ್ರತಿಕ್ರಿಯೆ
ಹೇಮಂತ್ ಗುಪ್ತಾ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿದ್ದಾರೆ. ನ್ಯಾಯಮೂರ್ತಿ ಸುಧಾಂಶ ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ರದ್ದುಗೊಳಿಸಿದ್ದಾರೆ. ಹಿಜಾಬ್ ವಿವಾದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೊಳಿಸಲಾಗಿದೆ.