ಚಂಡೀಗಢ: ತಮ್ಮ ಮನಸ್ಸಿನ ಮೇಲೆ ನಿಯಂತ್ರಣ ಇಟ್ಟುಕೊಳ್ಳದ ಪುರುಷರು ಮಹಿಳೆಯರಿಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಾರೆ ಎಂದು ಹರ್ಯಾಣದ ಕ್ಯಾಬಿನೆಟ್ ಸಚಿವ ಅನಿಲ್ ವಿಜ್ ಹೇಳಿದ್ದಾರೆ.
ಹರ್ಯಾಣದ ಕ್ಯಾಬಿನೆಟ್ ಸಚಿವ ಅನಿಲ್ ವಿಜ್ ಅವರು ಗುರುವಾರ ನಡೆಯುತ್ತಿರುವ ಹಿಜಾಬ್ ವಿವಾದದ ಬಗ್ಗೆ ಮಾತನಾಡುತ್ತಾ, ತಮ್ಮ ಮೇಲೆ ಯಾವುದೇ ನಿಯಂತ್ರಣವಿಲ್ಲದ ಪುರುಷರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮಹಿಳೆಯರನ್ನು ಹಿಜಾಬ್ ಧರಿಸುವಂತೆ ಒತ್ತಾಯಿಸುತ್ತಾರೆ ಎಂದು ಹೇಳಿದರು.
ಮಹಿಳೆಯರು ಹಿಜಾಬ್ ನಿಂದ ಮುಕ್ತರಾಗಲು ಪುರುಷರು ತಮ್ಮ ಮನಸ್ಸನ್ನು ಬಲಪಡಿಸಬೇಕೆಂದು ಅವರು ಒತ್ತಾಯಿಸಿದರು. ಹಿಜಾಬ್ ಪ್ರಕರಣದ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ಹೊರಡಿಸಿರುವ ತೀರ್ಪಿ ನ ಬೆನ್ನಲ್ಲೇ ಸಚಿವರು ಈ ಹೇಳಿಕೆ ನೀಡಿದ್ದಾರೆ.
“ಪುರುಷರು ತಮ್ಮ ಬಯಕೆಗಳು ಅಥವಾ ಉತ್ಸಾಹವನ್ನು ನಿಯಂತ್ರಿಸಲು ಸಾಧ್ಯವಾಗದೇ ಮಹಿಳೆಯರನ್ನು ಹಿಜಾಬ್ ಧರಿಸಲು ಮತ್ತು ತಮ್ಮನ್ನು ತಾವು ಸಂಪೂರ್ಣವಾಗಿ ಮುಚ್ಚಿಕೊಳ್ಳುವಂತೆ ಬಲವಂತಪಡಿಸಿದರು. ಅವರ ಮನಸ್ಸನ್ನು ಬಲಪಡಿಸುವುದು ಅಗತ್ಯವಾಗಿತ್ತು, ಆದರೆ ಶಿಕ್ಷೆಯನ್ನು ಮಹಿಳೆಯರಿಗೆ ನೀಡಲಾಯಿತು, ಅವರನ್ನು ತಲೆಯಿಂದ ಪಾದದವರೆಗೆ ಮುಚ್ಚಲಾಯಿತು. ಇದು ಘೋರ ಅನ್ಯಾಯ ಎಂದಿದ್ದಾರೆ.
ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ (Supreme Court) ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ.
ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯದ ಹಿನ್ನೆಲೆಯಲ್ಲಿ ಹಿಜಾಬ್ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ. ಹೇಮಂತ್ ಗುಪ್ತಾ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿದ್ದಾರೆ. ನ್ಯಾಯಮೂರ್ತಿ ಸುಧಾಂಶ ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ರದ್ದುಗೊಳಿಸಿದ್ದಾರೆ. ಹಿಜಾಬ್ ವಿವಾದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೊಳಿಸಲಾಗಿದೆ
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ನಿವೃತ್ತರಾಗುವ ಮೊದಲು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ.
ಇನ್ನು ಉಡುಪಿಯ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್ಗೆ ತರಗತಿಯಲ್ಲಿ ನಿರ್ಬಂಧ ವಿಧಿಸಿದ ಕಾಲೇಜಿನ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು.ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಾಲಾ, ಕಾಲೇಜಿನ ತರಗತಿಗಳಿಗೆ ಹಿಜಾಬ್ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿತ್ತು. ಅಲ್ಲದೆ, ಹಿಜಾಬ್ ಧಾರಣೆ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದೂ ವ್ಯಾಖ್ಯಾನಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
जिन पुरुषों का महिलाओ को देखकर मन मचलता था उन्होंने ही महिलाओं को हिजाब डालने के लिए मजबूर किया । आवश्यकता तो अपने मन को मजबूत करने की थी परंतु सजा महिलाओं को दी गई उनको सिर से लेकर पांव तक डाक दिया। यह सरासर नाइंसाफी है । पुरुष अपना मन मजबूत करे और महिलाओ को हिजाब से मुक्ति दें
— ANIL VIJ MINISTER HARYANA (@anilvijminister) October 13, 2022